ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

KannadaprabhaNewsNetwork |  
Published : Jan 19, 2026, 01:15 AM IST
16ಕೆಪಿಎಲ್‌ 03 ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಸವಿತಾ ಮಹರ್ಷಿ ಜಯಂತಿ ಜ.25 ರಂದು ಸರಳವಾಗಿ ಆಚರಿಸಲಾಗುತ್ತದೆ. ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು

ಕೊಪ್ಪಳ: ಪ್ರತಿ ವರ್ಷದಂತೆ ಈ ವರ್ಷವೂ ಕಾಯಕ ಶರಣರ ಹಾಗೂ ಮಹನಿಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಯಕ ಶರಣರ ಮತ್ತು ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಯಕ ಶರಣರ ಜಯಂತಿ ಫೆ.10 ರಂದು ಸರಳವಾಗಿ ಪ್ರತಿ ವರ್ಷದಂತೆ ಈ ವರ್ಷವು ಆಚರಿಸಲಾಗುತ್ತಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿರಬೇಕು ಎಂದು ಹೇಳಿದರು.

ಫೆ.16 ರಂದು ನಗರದ ಸಾಹಿತ್ಯ ಭವನದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಗಡಿಯಾರ ಕಂಬ ವೃತ್ತದಿಂದ ಸಾಹಿತ್ಯ ಭವನದವರೆಗೆ ಮಾಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ಎಲ್ಲರೂ ಭಾಗವಹಿಸಬೇಕು. ವೇದಿಕೆ ಕಾರ್ಯಕ್ರಮ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.

ಸವಿತಾ ಮಹರ್ಷಿ ಜಯಂತಿ ಜ.25 ರಂದು ಸರಳವಾಗಿ ಆಚರಿಸಲಾಗುತ್ತದೆ. ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಈ ಎಲ್ಲ ಮಹನೀಯರ ಜಯಂತಿ ಕಾರ್ಯಕ್ರಮಗಳ ದಿನದಂದು ಎಲ್ಲ ಶಾಲಾ-ಕಾಲೇಜುಗಳಲ್ಲಿ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಸವಿತಾ ಸಮಾಜದ ಮುಖಂಡ ತುಕಾರಾಂ, ಮಾರುತಿ ಸೂಗೂರ, ನಾಗರಾಜ ಕಂಪ್ಲಿ, ದೇವಪ್ಪ ಹಡಪದ, ಮಡಿವಾಳ ಸಮಾಜದ ಮುಖಂಡ ಕೃಷ್ಣ ಮಡಿವಾಳ, ರಾಮಣ್ಣ ಕುಟಗನಹಳ್ಳಿ, ಗವಿಸಿದ್ದಪ್ಪ ಮಡಿವಾಳ, ಕಿರಣ ಮಡಿವಾಳ, ಕಾಯಕ ಶರಣರ ಸಮಾಜದ ಮುಖಂಡ ಡಾ.ಬಿ.ಜ್ಞಾನಸುಂದರ್, ರಾಮಣ್ಣ ಕಂದಾರಿ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೆಹಲಿ ಭೇಟಿ ವೇಳೆ ಉಪಮುಖ್ಯಮಂತ್ರಿ ನಿಗೂಢ ಹೇಳಿಕೆ
ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ