ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ

KannadaprabhaNewsNetwork |  
Published : Sep 05, 2024, 12:38 AM IST
3 | Kannada Prabha

ಸಾರಾಂಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆ.27ರ ಬೆಳಗ್ಗೆ 10ಕ್ಕೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ನಗರದ ಜಲದರ್ಶಿನಿಯ ಅತಿಥಿಗೃಹದಲ್ಲಿ ಬುಧವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ ಎಂದರು.

ಕಾರ್ಯಕ್ರಮದ ದಿನದಂದು ಅರಮನೆಯ ಮುಂಭಾಗದಲ್ಲಿ ಹೆಚ್ಚಿನ ಅತಿಥಿ ಪ್ರವಾಸಿಗರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿ. ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ, ನೃತ್ಯ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂಥ ಕಾರ್ಯಕ್ರಮ ಆಯೋಜಿಸಿ. ಕಲಾತಂಡಗಳನ್ನು ಹೊರತುಪಡಿಸಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳೀಯ ಸಂಸ್ಕೃತಿ ಬಿಂಬಿಸುವಂಥ ಧಿರಿಸನ್ನು ಧರಿಸುವಂತೆ ಅವರು ಸೂಚಿಸಿದರು.

ಸೆ.12 ರಂದು ಸೋಮನಾಥಪುರ ಉತ್ಸವ:

ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ಮಾತನಾಡಿ, ವಿಶ್ವ ಪರಂಪರೆ ತಾಣವಾಗಿ ಗುರುತಿಸಲ್ಪಟ್ಟಿರುವ ಸೋಮನಾಥಪುರದ ಉತ್ಸವವನ್ನು ಸೆ.12 ರಂದು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಭಾರತೀಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಹೊಂದಿರುವ ಬ್ಲಾಗರ್ಸ್ ಗಳನ್ನು ಕರೆಸಲಾಗುತ್ತಿದ್ದು, ಬಂದಂತಹ ಅತಿಥಿಗಳನ್ನು ಉತ್ತಮವಾಗಿ ಸತ್ಕರಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.

ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ಮೈಸೂರು ಸಂಘ, ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಪ್ರಶಾಂತ್, ಟ್ರಾವೆಲ್ ಸಂಸ್ಥೆಯ ಸಿ.ಟಿ. ಜಯಕುಮಾರ್, ಭರತ್ ಗೌಡ, ಜಿಎಸ್ಎಸ್ ಸಂಸ್ಥೆಯ ಶ್ರೀಹರಿ ದ್ವಾರಕನಾಥ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ