ಜಾತೀಯತೆ ನಿರ್ಮೂಲನೆ ಮಾಡಿ ಸಮಾನತೆ ಬೆಳೆಸೋಣ

KannadaprabhaNewsNetwork |  
Published : Aug 17, 2026, 01:15 AM IST
50 | Kannada Prabha

ಸಾರಾಂಶ

ಭಾರತವನ್ನು ಭವ್ಯ ರಾಷ್ಟ್ರವನ್ನಾಗಿ ಕಟ್ಟುವಲ್ಲಿ ಅನೇಕ ಮಹಾನ್ ನಾಯಕರು ಹಾಗೂ ಸಾಧಕರು ಅಪಾರ ಶ್ರಮಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸರಗೂರು

ಸರಗೂರು: ಸ್ವಾತಂತ್ರ್ಯಕ್ಕಾಗಿ ಮಹಾನ್ ನಾಯಕರು ತ್ಯಾಗ, ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅವರ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರಿತು, ದೇಶಪ್ರೇಮ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿರುವ ಜಾತೀಯತೆಯನ್ನು ನಿರ್ಮೂಲನೆ ಮಾಡಿ, ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಮೋಹನಕುಮಾರಿ ಕರೆ ನೀಡಿದರು.

ಪಟ್ಟಣದ ಶ್ರೀ ಜಯಚಾಮರಾಜೇಂದ್ರ ಕ್ರೀಡಾಂಗಣದ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತವನ್ನು ಭವ್ಯ ರಾಷ್ಟ್ರವನ್ನಾಗಿ ಕಟ್ಟುವಲ್ಲಿ ಅನೇಕ ಮಹಾನ್ ನಾಯಕರು ಹಾಗೂ ಸಾಧಕರು ಅಪಾರ ಶ್ರಮಿಸಿದ್ದಾರೆ. ಅವರ ತ್ಯಾಗ, ಹೋರಾಟ ಮತ್ತು ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ರಾಜಗುರು ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶಕ್ಕಾಗಿ ಉತ್ತಮ ಕೊಡುಗೆ ನೀಡಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಕೇವಲ ರಾಷ್ಟ್ರೀಯ ಹಬ್ಬಗಳಂದು ಮಾತ್ರವಲ್ಲದೆ, ನಿತ್ಯವೂ ಸ್ಮರಿಸಬೇಕು ಎಂದು ಹೇಳಿದರು.ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವೂ ಅಗತ್ಯಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಘೋತ್ತಮ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ರಾಷ್ಟ್ರಭಕ್ತಿಯ ಭಾವನೆ ಬೆಳೆಸುವುದು ಅತ್ಯಂತ ಅಗತ್ಯ. ರಾಷ್ಟ್ರೀಯ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದರು.ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, ಇನ್ನಷ್ಟು ಆವಿಷ್ಕಾರಗಳಿಗೆ ಯುವಜನತೆ ಮುಂದಾಗಬೇಕು. ರಾಜಕೀಯ ಸ್ವಾತಂತ್ರ್ಯದ ಜತೆಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವೂ ದೊರೆಯಬೇಕು. ಪ್ರತಿಯೊಬ್ಬರ ತಲಾ ಆದಾಯ ಹೆಚ್ಚಾಗಬೇಕು. ಶಿಕ್ಷಣದ ಪ್ರಮಾಣ ಹೆಚ್ಚುತ್ತಿರುವುದು ದೇಶದ ಅಭಿವೃದ್ಧಿಯ ಆಶಾದಾಯಕ ಬೆಳವಣಿಗೆಯಾಗಿದ್ದು, ಜ್ಞಾನ ಮತ್ತು ಕೌಶಲ್ಯದ ಮೂಲಕ ಭಾರತವನ್ನು ಇನ್ನಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.ಸಾಧಕರಿಗೆ ಸನ್ಮಾನ, ಮಕ್ಕಳಿಂದ ಅದ್ದೂರಿ ಜಾಥಾಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಜಾಥಾ ನಡೆಯಿತು. ದೇಶಭಕ್ತಿ ಘೋಷಣೆಗಳು, ರಾಷ್ಟ್ರಧ್ವಜಗಳೊಂದಿಗೆ ಸಾಗಿದ ವಿದ್ಯಾರ್ಥಿಗಳ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು.ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು, ಪೌರಕಾರ್ಮಿಕರು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ, ಸಂಸ್ಕೃತಿ ಹಾಗೂ ರಾಷ್ಟ್ರಪ್ರೇಮ ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್ (ವಿರೇಶ್), ಸದಸ್ಯರಾದ ಸಣ್ಣತಾಯಮ್ಮ, ಶ್ರೀನಿವಾಸ್, ಚಲುವಕೃಷ್ಣ, ಹೇಮಾವತಿ ರಮೇಶ್, ಉಮಾರಾಮಚಂದ್ರ, ನೂರಾಳಸ್ವಾಮಿ, ರಾಧಿಕಾಶ್ರೀನಾಥ್, ದಿವ್ಯಾ ನವೀನ್, ವಿನಯ್, ಚಂದ್ರಕಲಾ ರಾಜಣ್ಣ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಪ್ರೇಮ್‌ಕುಮಾರ್, ಆರಕ್ಷಕ ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಮುಖ್ಯಾಧಿಕಾರಿ ಕೆ. ಸಂತೋಷ್‌ಕುಮಾರ್, ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಇಟ್ನ ರಾಜಣ್ಣ, ದಸಂಸ ಮುಖಂಡ ಸಣ್ಣಸ್ವಾಮಿ, ಕಸಾಪದ ಎಂ. ಕೆಂಡಗಣ್ಣಸ್ವಾಮಿ, ಮೊಳೆಯೂರು ಕೆ. ಹರಿದಾಸ್,ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷ ಪಿ.ಚಿನ್ನಣ್ಣ, ಶಿವಶಂಕರ್, ಚಲುವರಾಜು, ಭಾಗ್ಯಲಕ್ಷ್ಮಿ, ನಿಂಗರಾಜು, ವೆಂಕಟಸ್ವಾಮಿ, ಸರಗೂರು ಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಿಡ್ಲ್‌ ಕೆಳಗೆ.. ಸ್ರೀ ಮಠದ ಬಹುದಿನಗಳ ಬೇಡಿಕೆಗೆ ಸ್ಪಂದನೆ: ಆರ್‌ ಕೆ ಪಾಟೀಲ್‌
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಸ್ವಾಮೀಜಿ