ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ; ಜಾಗೃತಿ

KannadaprabhaNewsNetwork |  
Published : Sep 09, 2026, 01:15 AM IST
ಫೋಟೋ ಶೀರ್ಷಿಕೆ 5ಎಸ್‍ಡಿಟಿ3ಸವದತ್ತಿಯ ತಾ.ಪಂ ಸಭಾಭವನದಲ್ಲಿ ಹಮ್ಮಿಕೊಂಡ ಪ್ರಜಾ ಸೇವಾ ಅಂದೋಲನ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿದರು.ಫೋಟೋ ಶೀರ್ಷಿಕೆ 5ಎಸ್‍ಡಿಟಿ4ಸವದತ್ತಿಯ ತಾ.ಪಂ ಸಭಾಭವನದಲ್ಲಿ ಹಮ್ಮಿಕೊಂಡ ಪ್ರಜಾ ಸೇವಾ ಅಂದೋಲನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ರಾಯಚೂರು ಮತ್ತು ಸರ್ಕಾರಿ ಪ್ರೌಢಶಾಲೆ ಯರಮರಸ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಕುರಿತು ಯರಮರಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರಾಯಚೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ರಾಯಚೂರು ಮತ್ತು ಸರ್ಕಾರಿ ಪ್ರೌಢಶಾಲೆ ಯರಮರಸ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಕುರಿತು ಯರಮರಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಪರಿಸರ ಅಧಿಕಾರಿ ಗಿರೀಶ್ ಮಾತನಾಡಿ, ಈ ವರ್ಷ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸು ವುದರೊಂದಿಗೆ ಜಲಮೂಲಗಳಾದ ನದಿ, ಕೆರೆ ಹಾಗೂ ಬಾವಿಗಳನ್ನು ಸಂರಕ್ಷಿಸುವ ಪ್ರಯತ್ನಕ್ಕೆ ಎಲ್ಲರೈ ಕೈ ಜೋಡಿಸಬೇಕು. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಬಣ್ಣಗಳಿಂದ ಸಿದ್ಧಪಡಿಸಿದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಬೇಕು ಎಂದು ಮನವಿ ಮಾಡಿದರು. ಶಾಲೆಯ ಮುಖ್ಯೋಪಾಧ್ಯಯ ಕೃಷ್ಣ ಮತಾನಾಡಿ, ಗಣೇಶ ಹಬ್ಬದಲ್ಲಿ ಮಣ್ಣಿನ ಮೂರ್ತಿಯನ್ನು ಪೂಜಿಸಿ, ಪ್ಲಾಸ್ಟಿಕ್ ಹಾರ, ಪ್ಲಾಸ್ಟಿಕ್ ಹೂ, ಕ್ಯಾರಿ ಬ್ಯಾಗ್‌ಗಳನ್ನು ಬಳಸಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸಹ ಶಿಕ್ಷಕರಾದ ಸುವರ್ಣ, ಪ್ರವೀಣ್, ವೈಜ್ಞಾನಿಕ ಸಹಾಯಕ ಮಲ್ಲಿಕಾರ್ಜುನ, ಕ್ಷೇತ್ರ ಸಹಾಯಕರು ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗರ್‌ಹುಕುಂ ಜಮೀನು ವಶ ವಿರೋಧಿಸಿ ರೈತರ ಪ್ರತಿರೋಧ ಸಮಾವೇಶ
ಕ್ರೀಡಾಸ್ಫೂರ್ತಿ ಸಮಗ್ರ ವ್ಯಕ್ತಿತ್ವ ನಿರ್ಮಾಣಕ್ಕೆ ಅಡಿಗಲ್ಲು: ಶಶಾಂಕ್