79 ಗಿಡ ನೆಟ್ಟು ಸ್ವಾತಂತ್ರ್ಯ ದಿನ ಆಚರಣೆ

KannadaprabhaNewsNetwork |  
Published : Aug 17, 2025, 01:33 AM IST
೭೯ ಗಿಡಗಳನ್ನೂ ನೆಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ | Kannada Prabha

ಸಾರಾಂಶ

ತಾಲೂಕು ಸರ್ಕಾರಿ ಆಸ್ಪತ್ರೆಯ ವತಿಯಿಂದ ೭೯ನೇ ಸ್ವಾತಂತ್ಯ್ಯ ದಿನಾಚರಣೆ ನಿಮಿತ್ತ ರಾಷ್ಟ್ರೀಯ ಹೆದ್ದಾರಿ ೯೪೮ರ ಬದಿಯಲ್ಲಿ ೭೯ ಗಿಡಗಳನ್ನು ನೆಡುವು ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ, ಯಳಂದೂರು

ತಾಲೂಕು ಸರ್ಕಾರಿ ಆಸ್ಪತ್ರೆಯ ವತಿಯಿಂದ ೭೯ನೇ ಸ್ವಾತಂತ್ಯ್ಯ ದಿನಾಚರಣೆ ನಿಮಿತ್ತ ರಾಷ್ಟ್ರೀಯ ಹೆದ್ದಾರಿ ೯೪೮ರ ಬದಿಯಲ್ಲಿ ೭೯ ಗಿಡಗಳನ್ನು ನೆಡುವು ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.ತಾಲೂಕು ಆಸ್ಪತ್ರೆಯ ಮುಂಭಾಗದಲ್ಲಿ ಧ್ವಜರೋಹಣವನ್ನು ತಾಲೂಕು ವೈದ್ಯಾಧಿಕಾರಿ ಡಾ.ಶ್ರೀಧರ್ ನೇರವೇರಿಸಿದ ನಂತರ ಗಿಡಗಳನ್ನು ನೆಟ್ಟು ಮಾತನಾಡಿ, ದೇಶದ ಸ್ವಾತಂತ್ರ್ಯ ತಂದು ಕೊಟ್ಟವರ ಸ್ಮರಣೆ ಅಗತ್ಯ. ದೇಶವು ಬ್ರಿಟಿಷರ ಆಡಳಿತದಿಂದ ಮುಕ್ತವಾಗಲು ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ವೀರರನ್ನು ನೆನಪಿಟ್ಟುಕೊಳ್ಳುಲು ಮತ್ತು ಅವರಿಗೆ ಗೌರವ ಸಲ್ಲಿಸಲು ಒಂದು ಸಂದರ್ಭವಾಗಿದೆ. ಜತೆಗೆ ಭಾರತ ದೇಶವು ವೈವಿಧ್ಯತೆ ಮತ್ತು ಏಕತೆಯ ಸಂಕೇತವಾಗಿದೆ. ಈ ದಿನ ನಾವು ನಮ್ಮ ದೇಶದ ಅಭಿವೃದ್ಧಿಗೆ ಬದ್ಧರಾಗಿ ಎಲ್ಲರೂ ಸಮಾನವಾಗಿ ಬದುಕುವ ಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು. ಜತೆಗೆ ಪ್ರತಿಯೊಬ್ಬರು ಪರಿಸರ ಪ್ರೇಮ ಬೆಳೆಸಿಕೊಂಡು ಗಿಡ-ಮರ, ಕಾಡು ಸಂರಕ್ಷಣೆ ಮಾಡುವುದರ ಜತೆಗೆ ಅದರ ಪೋಷಣೆಯನ್ನು ಕಡ್ಡಾಯವಾಗಿ ಮಾಡಬೇಕಾಗಿದೆ ಎಂದು ತಿಳಿಸಿದರು.

ಪರಿಸರ ಪ್ರೇಮಿ ವೆಂಕಟೇಶ್ ಮಾತನಾಡಿ, ಎಲ್ಲರೂ ತಮ್ಮ ತಂದೆ, ತಾಯಿ, ಮಕ್ಕಳು ಸೇರಿದಂತೆ ಕುಟುಂಬದವರ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಇದರಿಂದ ಪರಿಸರ ಪ್ರೇಮ ಜತೆಗೆ ಕುಟುಂಬದ ವರ್ಗದವರ ಹೆಸರು ಉಳಿಸಿ ಬೆಳೆಸುವ ಮೂಲಕ ಪರಿಸರಕ್ಕೆ ಪೂರಕವಾಗಲಿದೆ ಎಂದು ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಡಾ.ನಾಗೇಂದ್ರಮೂರ್ತಿ, ಡಾ.ನಾಗೇಶ್, ಡಾ.ಹರಿಪ್ರಸಾದ್, ಮುಖಂಡರಾದ ಕಂದಹಳ್ಳಿನಂಜುಂಡಸ್ವಾಮಿ, ಆರೋಗ್ಯ ಸೇವಾ ಸಮಿತಿ ಸದಸ್ಯ ರೂಪೇಶ್, ಶಾಂತರಾಜು, ಸರ್ಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ವೈ.ಎಂ. ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ