ಕನ್ನಡಪ್ರಭ ವಾರ್ತೆ ಅಥಣಿ
ಕೇಕ್ ಕಟ್ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ರೇಖಾ ಸೋಮಣ್ಣವರ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳಾ ಪದಾಧಿಕಾರಿಗಳು ಪ್ರತಿ ಗ್ರಾಮಗಳಿಗೆ ಹೋಗಿ ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸೋಣ. ಸ್ವೀಪ್ ಸಮಿತಿ ಸಹಯೋಗದಲ್ಲಿ ಕೆಲಸ ಮಾಡಿ ಶೇ.100ರಷ್ಟು ಮತದಾನ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಈ ಕಾರ್ಯಕ್ಕೆ ಪ್ರತಿಯೋಬ್ಬ ಮಹಿಳಾ ಅಧಿಕಾರಿ ಕೈಜೋಡಿಸಬೇಕೆಂದು ಕರೆ ನೀಡಿದರು.
ವಿಜಯಲಕ್ಷ್ಮೀ ವಂಟಮೂರಿ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿ ಮನೆ ಮನೆಗೆ ಹೋಗಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸೋಣ. ಸ್ವಯಂ ಪ್ರೇರಣೆಯಿಂದ ಜಾಗೃತಿ ಜಾಥಾದಲ್ಲಿ ಭಾಗವಹಿಸುವಂತ ಕಾರ್ಯಕ್ರಮ ಹಮ್ಮಿಕೊಳ್ಳೋಣ ಎಂದು ಹೇಳಿದರು.ವಿದ್ಯಾ ಸೂರ್ಯವಂಶಿ ಮಾತನಾಡಿ, ಮತದಾನ ಪ್ರತಿಯೋಬ್ಬರ ಹಕ್ಕು. ಯಾವುದೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸೋಣ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ತಾಪಂ ಇಒ ಶಿವಾನಂದ ಕಲ್ಲಾಪೂರ ಮಾತನಾಡಿ, ತಾಲೂಕಿನ ಎಲ್ಲ ಮಹಿಳಾ ಪಿಡಿಒ ಮತ್ತು ಮಹಿಳಾ ಅಧಿಕಾರಿಗಳು ಸ್ವೀಪ್ ಸಮಿತಿ ಸಹಯೋಗದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಷಯ ಎಂದರು. ಪಿಡಿಒ ಸಂಘದ ಅಧ್ಯಕ್ಷ ಸಚೀನ ಪಾಟೀಲ ಸ್ವಾಗತಿಸಿದರು. ಜಿ.ಎಸ್.ಮಠದ ವಂದಿಸಿದರು.