ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಅನರ್ಹತೆ ಹೈಕೋರ್ಟ್‌ ತಡೆ, ಬಿಜೆಪಿ ಸಂಭ್ರಮಾಚರಣೆ

KannadaprabhaNewsNetwork |  
Published : Dec 05, 2025, 01:00 AM IST
ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸದಸ್ಯತ್ವಕ್ಕೆ ತಾತ್ಕಾಲಿಕ ತಡೆ ನೀಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಮಹಾಲಕ್ಷ್ಮೀ ಸರ್ಕಲ್‌ನಲ್ಲಿ ಪಠಾಕಿ ಸಿಡಿಸಿ ಸಿಹಿ ಹಂಚಿ ಸಭ್ರಮಿಸಿದರು.  | Kannada Prabha

ಸಾರಾಂಶ

ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪದಡಿ ಅವರ ಸದಸ್ಯತ್ವ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮಹಾಲಕ್ಷ್ಮೀ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ರಟ್ಟೀಹಳ್ಳಿ: ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಆರೋಪದಡಿ ಅವರ ಸದಸ್ಯತ್ವ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮಹಾಲಕ್ಷ್ಮೀ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಶಿವರಾಜ ಗೂಳಪ್ಪನವರ ರಟ್ಟೀಹಳ್ಳಿ ಪಟ್ಟಣ ಪಂಚಾಯತ್ ಬಿಜೆಪಿ ಬಾಹುಳ್ಯ ಕ್ಷೇತ್ರವಾಗಿದ್ದು, ನಮ್ಮಲ್ಲಿನ ಆಂತರಿಕ ಕಚ್ಚಾಟದಿಂದಾಗಿ ನಮಗೆ ಚುನಾವಣೆ ಸಂದರ್ಭದಲ್ಲಿ 15 ವಾರ್ಡಗಳಲ್ಲಿ 6 ಸ್ಥಾನ ನೀಡಿದ್ದ ಮತದಾರರು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಕಾರಣ ಕಾಂಗ್ರೆಸ್ ಆಂತರಿಕ ಬೆಳವಣಿಗೆಯಿಂದ ಬೇಸತ್ತು ಕಾಂಗ್ರೆಸ್ ಚಿಹ್ನೆಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ರವೀಂದ್ರ ಮುದಿಯಪ್ಪನವರ ಹಾಗೂ ಪಕ್ಷೇತರ ಅಭ್ಯರ್ಥಿ ಶಿವಕುಮಾರ ಉಪ್ಪಾರ ಬಿಜೆಪಿಗೆ ಬೆಂಬಲ ಸೂಚಿಸಿದ್ದರಿಂದ ಪಕ್ಷ ಅಧಿಕಾರಕ್ಕೇರಲು ಸಹಕಾರಿಯಾಗಿತ್ತು. ಇದನ್ನು ಸಹಿಸದ ಕಾಂಗ್ರೆಸ್‌ನವರಿಗೆ ತರಾತುರಿಯಲ್ಲಿ ಸುಳ್ಳು ದಾಖಲಾತಿ ಸೃಷ್ಟಿಸಿ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿದ್ದರಿಂದ ಆಡಳಿತ ರೂಢ ಪಕ್ಷದ ಪರವಾಗಿ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟನಲ್ಲಿ ನಮಗೆ ನ್ಯಾಯ ಸಮ್ಮತ ತೀರ್ಪು ಬಂದಿರುವುದು ನಮಗೆ ಅತ್ಯಂತ ಸಂತಸವನ್ನುಂಟು ಮಾಡಿದೆ ಹಾಗೂ ಮತ್ತೆ ಬಿಜೆಪಿನೆ ಪಟ್ಟಣ ಪಂಚಾಯತನಲ್ಲಿ ಅಧಿಕಾರದಲ್ಲಿ ಮುಂದುವರೆವುದು ಎಂದು ಸಂತಸ ವ್ಯಕ್ತ ಪಡಿಸಿದರು.

ಪಟ್ಟಣ ಪಂಚಾಯತ್ ಸದಸ್ಯ ಬಸವರಾಜ ಆಡಿನವರ, ಬಸವರಾಜ ಕಟ್ಟಿಮನಿ, ರವಿ ಹದಡೇರ, ಮುಖಂಡರಾದ ಗಣೇಶ ವೇರ್ಣೇಕರ್, ಮುತ್ತು ಬೆಣ್ಣಿ, ವೀರನಗೌಡ ಯಡಚಿ, ಆನಂದ ಪುಟ್ಟಣ್ಣನವರ, ಸುನೀಲ್ ಸರಶೆಟ್ಟರ್, ರೋಹಿತ್ ಮುದಿಯಪ್ಪನವರ, ಬಸವರಾಜ ಗಬ್ಬೂರ, ರಾಜು ಮುದಿಯಪ್ಪನವರ, ರಾಘು ಮುದಿಯಪ್ಪನವರ, ಅರುಣ ಬೆಣ್ಣಿ, ವಿನಾಯಕ ಶಿಗ್ಗಾಂವಕರ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೌಕಾ ದಿನಾಚರಣೆಯಲ್ಲಿ ರಾಜ್ಯಪಾಲರು ಭಾಗಿ
ಡಿಸೆಂಬರ್‌ 10ರಿಂದ ಹುಕ್ಕೇರಿಮಠದ ಶ್ರೀಗಳಿಂದ ಹಾವೇರಿಯಲ್ಲಿ ಜನಜಾಗೃತಿ ಪಾದಯಾತ್ರೆ