ಕನ್ನಡಪ್ರಭ ವಾರ್ತೆ ಮದ್ದೂರು
ಹಬ್ಬದ ಅಂಗವಾಗಿ ಮುಂಜಾನೆ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ, ಕೋಟೆ ಬೀದಿ ಶ್ರೀಉಗ್ರ ನರಸಿಂಹ ಸ್ವಾಮಿ, ಕಾಶಿ ವಿಶ್ವೇಶ್ವರಸ್ವಾಮಿ, ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ಹಾಗೂ ಚಿಕ್ಕ ಅಂಕನಹಳ್ಳಿಯ ನಂದಿ ಬಸವೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಅಭಿಷೇಕದೊಂದಿಗೆ ಪುಷ್ಪಲಂಕಾರ ಸೇವೆ ನೆರವೇರಿಸಿ ವಿಶೇಷ ಪೂಜಾ ಕಾರ್ಯಗಳು ನೆರವೇರಿತು.
ಗ್ರಾಮೀಣ ಭಾಗದಲ್ಲಿ ರೈತರು ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಿನ್ನೆಲೆಯಲ್ಲಿ ತಮ್ಮ ಜಾನುವಾರುಗಳನ್ನು ಶುಚಿಗೊಳಿಸುವ ಮೂಲಕ ವರ್ಷ ವಿಡಿದುಡಿದ ಜಾನುವಾರುಗಳಿಗೆ ವಿಶೇಷ ಪುಷ್ಪಾಲಂಕಾರ ದೊಂದಿಗೆ ಶೃಂಗರಿಸಿ ಯಾವುದೇ ರೋಗ ರುಜಿನಗಳು ಬಾರದಿರಲಿ ಎಂದು ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.ವರ್ಷವಿಡಿ ತಾವು ಬೆಳೆದ ದವಸ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸಿ ಭಕ್ತಿ ಭಾವ ಮೆರೆದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಹಿಳೆಯರು ಮತ್ತು ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ಮನೆ ಮನೆಗೆ ತೆರಳಿ ಎಳ್ಳು ಬೆಲ್ಲ ವಿನಿಮಯ ಮಾಡಿಕೊಂಡರು.ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿ ಸಂಭ್ರಮ
ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ರೈತರು ತಮ್ಮ ಜಾನುವಾರುಗಳನ್ನು ಬಗೆಬಗೆಯ ಹೂವು, ಬಣ್ಣಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.
ನಂತರ ಗ್ರಾಮದ ಹೊರವಲಯದಲ್ಲಿ ಹಿಂದೂ ಸಂಪ್ರದಾಯದಂತೆ ಕಿಚ್ಚುಹಾಯಿಸುವ ಮೂಲಕ ಸಂಭ್ರಮಿಸಿದರು. ಜಾನುವಾರುಗಳ ಕಿಚ್ಚುಹಾಯಿಸುವುದನ್ನು ಕಂಡು ಜನರು ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದರು. ಇನ್ನೂ ಹೆಣ್ಣುಮಕ್ಕಳು ಬಗೆಬಗೆಯ ಉಡುಗೆ ತೊಡುಗೆಗಳನ್ನು ತೊಟ್ಟು ಮನೆಮನೆಗೆ ಎಳ್ಳುಬೆಲ್ಲ ಹಂಚುವ ಮೂಲಕ ಸಂಭ್ರಮಿಸಿದರು.ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ