ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪೀಹಳ್ಳಿ ರಮೇಶ್ ನೇತೃತ್ವದಲ್ಲಿ ಪಟ್ಟಣದ ಮೈಸೂರು ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಪೀಹಳ್ಳಿ ರಮೇಶ್ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವುದು ಅವರ ಆಡಳಿತದ ಅವಧಿಯಲ್ಲಿ ಮಾಡಿರುವ ಜನಪರ ಕೆಲಸಗಳಿಗೆ ದೇಶದ ಜನರು ಮನ್ನಣೆ ನೀಡಿರುವುದು ಕಂಡು ಬರುತ್ತಿದೆ ಎಂದರು.ಬಿಜೆಪಿ ಆಡಳಿತಕ್ಕೆ ದೇಶವಲ್ಲದೆ ವಿವಿಧ ದೇಶದಲ್ಲಿ ಮೋದಿಯವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಿ. ಮಾಜಿ ಸಿ.ಎಂ.ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಒಳ್ಳೆಯ ಕೆಲಸ ಮಾಡಲಿ ಎಂದರು.
ಪಂಜು ಮೆರವಣಿಗೆಯಲ್ಲಿ ರಾಜ್ಯ ಬಿಜೆಪಿ ರೈತ ಮರ‍್ಚ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಮುಖಂಡರಾದ ಮಹದೇವು, ಕೃಷ್ಣ, ಸಾಮಿಯಾನ ಪುಟ್ಟರಾಜು, ಹೇಮಂತ್ ಕುಮಾರ್, ಉಮೇಶ್,ನಾರಾಯಣ್, ಶ್ರೀನಿವಾಸ್ ರಾಮಕೃಷ್ಣ ಸೇರಿದಂತೆ ಇತರರಿದ್ದರು.
ಶ್ರೀರಂಗಪಟ್ಟಣ:
ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ನಾರಾಯಣ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿದ ಸಾರ್ವಜನಿಕರಿಗೆ ತೀರ್ಥ ಪ್ರಸಾದ, ಸಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಹಲಗೂರು:ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಪಟ್ಟಣದ ಚನ್ನಪಟ್ಟಣ ರಸ್ತೆಯ ಸೆಂಟ್ರಲ್ ಬ್ಯಾಂಕ್ ಬಳಿ ಸಂಭ್ರಮಾಚರಣೆ ಮಾಡಿದರು.