ಬೇಲೂರಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

KannadaprabhaNewsNetwork |  
Published : Jun 28, 2026, 02:15 AM IST
ಬೇಲೂರು ಫೋಟೋ :ನಾಡಪ್ರಭು ಕೆಂಪೇಗೌಡರ 517 ನೇ ವರ್ಷದ ಜಯಂತಿ ಅಂಗವಾಗಿ   ಬೇಲೂರಿನಲ್ಲಿ ಕೆಂಪೇಗೌಡರ ಪುತ್ಥಳಿಗೆ ಶಾಸಕ ಹೆಚ್.ಕೆ. ಸುರೇಶ್ ಮಾಲಾರ್ಪಣೆ  ಮಾಡಿದರು. | Kannada Prabha

ಸಾರಾಂಶ

ನಾಡಪ್ರಭು ಕೆಂಪೇಗೌಡರನ್ನು ನವಕರ್ನಾಟಕದ ನಿರ್ಮಾತೃ ಎಂದು ಕರೆಯುವುದು ಅತಿಶಯೋಕ್ತಿಯಲ್ಲ. ಬೆಂಗಳೂರು ನಗರವನ್ನು ನಿರ್ಮಿಸಿದ ಅವರು ದೂರದೃಷ್ಟಿಯ ಆಡಳಿತಗಾರರಾಗಿದ್ದು, ರಾಜಕಾಲುವೆಗಳ ಮೂಲಕ ಕೆರೆಗಳನ್ನು ಸಂಪರ್ಕಿಸಿ ಉತ್ತಮ ಜಲ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಿದ್ದರು. ಜನಪರ ಆಡಳಿತ, ದೂರದೃಷ್ಟಿ ಹಾಗೂ ಸೇವಾ ಮನೋಭಾವದಿಂದ ಅವರು ಇಂದಿಗೂ ಆದರ್ಶವಾಗಿದ್ದಾರೆ ಎಂದು ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ತಿಳಿಸಿದರು.

ಬೇಲೂರು: ಬೆಂಗಳೂರು ಇಂದು ರಾಜ್ಯದ ಆರ್ಥಿಕ ಶಕ್ತಿಯಾಗಿ ಬೆಳೆದಿರುವುದಕ್ಕೆ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿ ಪ್ರಮುಖ ಕಾರಣವಾಗಿದ್ದು ಅವರ ಆಶಯಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿಪಡಿಸಲು ಜನ ನಾಯಕರು ಮುಂದಾಗಬೇಕು ಎಂದು ಶಾಸಕ ಎಚ್ ಕೆ ಸುರೇಶ್ ಹೇಳಿದರು.ನಾಡಪ್ರಭು ಕೆಂಪೇಗೌಡರ 517ನೇ ವರ್ಷದ ಜಯಂತಿ ಅಂಗವಾಗಿ ಪಟ್ಟಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಸಾಂಕೇತಿಕವಾಗಿ ಜಯಂತಿ ಆಚರಿಸಲಾಗುತ್ತಿದ್ದು, ಜೂನ್ 29ರಂದು ಬಾಲಗಂಗಾಧರನಾಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶಂಭುನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಜಗತ್ತು ಭಾರತವನ್ನು ನೋಡಿದರೆ, ಭಾರತ ಕರ್ನಾಟಕವನ್ನು ನೋಡುತ್ತದೆ. ಅಂತಹ ಸಮೃದ್ಧ ರಾಜ್ಯದಲ್ಲಿ ಬದುಕುತ್ತಿರುವುದು ನಮ್ಮೆಲ್ಲರ ಭಾಗ್ಯ. ಹಾಸನ ಜಿಲ್ಲೆಯಲ್ಲೇ ಸುಮಾರು 15 ವರ್ಷಗಳ ಹಿಂದೆ ಮೊದಲ ಬಾರಿಗೆ ಕೆಂಪೇಗೌಡರ ಪುತ್ಥಳಿ ಸ್ಥಾಪಿಸಿ ಜಯಂತಿ ಆಚರಿಸಿದ ಹೆಗ್ಗಳಿಕೆ ಬೇಲೂರಿಗೆ ಸಲ್ಲುತ್ತದೆ. ಬೇಲೂರು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಅಂಬೇಡ್ಕರ್‌ ಜಯಂತಿ, ಬಸವ ಜಯಂತಿ, ಶಿವಾಜಿ ಜಯಂತಿ, ಕೆಂಪೇಗೌಡ ಜಯಂತಿ ಸೇರಿದಂತೆ ಎಲ್ಲ ಮಹನೀಯರ ಜಯಂತಿಗಳನ್ನು ಜಾತಿಧರ್ಮ ಭೇದವಿಲ್ಲದೆ ಸೌಹಾರ್ದಯುತವಾಗಿ ಆಚರಿಸುತ್ತಾ ಬಂದಿದ್ದಾರೆ. ಈ ಬಾರಿಯ ಜಯಂತಿಯಲ್ಲಿ ಬಾಲಗಂಗಾಧರನಾಥ ಸ್ವಾಮೀಜಿಯವರ ಪುತ್ಥಳಿ ಬಳಿಯಿಂದ ಭವ್ಯ ಮೆರವಣಿಗೆ ಆರಂಭವಾಗಲಿದ್ದು, ಸಮಾಜದ ಎಲ್ಲ ವರ್ಗದ ಜನರು ಯಾವುದೇ ಭಿನ್ನಾಭಿಪ್ರಾಯಗಳನ್ನು ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ಮಾತನಾಡಿ, ನಾಡಪ್ರಭು ಕೆಂಪೇಗೌಡರನ್ನು ನವಕರ್ನಾಟಕದ ನಿರ್ಮಾತೃ ಎಂದು ಕರೆಯುವುದು ಅತಿಶಯೋಕ್ತಿಯಲ್ಲ. ಬೆಂಗಳೂರು ನಗರವನ್ನು ನಿರ್ಮಿಸಿದ ಅವರು ದೂರದೃಷ್ಟಿಯ ಆಡಳಿತಗಾರರಾಗಿದ್ದು, ರಾಜಕಾಲುವೆಗಳ ಮೂಲಕ ಕೆರೆಗಳನ್ನು ಸಂಪರ್ಕಿಸಿ ಉತ್ತಮ ಜಲ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಿದ್ದರು. ಜನಪರ ಆಡಳಿತ, ದೂರದೃಷ್ಟಿ ಹಾಗೂ ಸೇವಾ ಮನೋಭಾವದಿಂದ ಅವರು ಇಂದಿಗೂ ಆದರ್ಶವಾಗಿದ್ದಾರೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರೇಗೌಡ, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ. ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ನಿಶಾಂತ್, ಪುರಸಭೆ ಅಧ್ಯಕ್ಷ ಅಕ್ರಂ ಶರೀಫ್, ಮಾಜಿ ಅಧ್ಯಕ್ಷ ಎ.ಆರ್. ಅಶೋಕ್, ಸದಸ್ಯ ಬಿ.ಸಿ. ಜಗದೀಶ್, ಅರ್ಬನ್ ಬ್ಯಾಂಕ್ ಅಧ್ಯಕ್ಷ ಪೈಂಟ್ ರವಿ, ಸಿದ್ದೇಗೌಡ, ಭಾರತಿ ಗೌಡ, ಲೋಹಿತ್, ಪುರಸಭೆ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ , ಎಚ್ ಎಂ ದಿನೇಶ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಉಪ್ಪಾರ ಸಮಾಜದ ಆಗ್ರಹ
ನಾಡಪ್ರಭುಗಳಿಂದ ಸಣ್ಣ ಸಮುದಾಯಗಳ ಏಳಿಗೆ