ಜೂ.4 ರಂದು ಶ್ರೀ ನಾಲ್ವಡಿ ‌ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

KannadaprabhaNewsNetwork |  
Published : May 22, 2026, 01:15 AM IST
3 | Kannada Prabha

ಸಾರಾಂಶ

ಅರಮನೆ ಆವರಣದಲ್ಲಿರುವ ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಅಶ್ವರೋಹಿ ದಳ, ಪೊಲೀಸ್ ಬ್ಯಾಂಡ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಲಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಜಿಲ್ಲಾಡಳಿತದ ವತಿಯಿಂದ ಜೂ.4 ರಂದು ರಾಜ್ಯ ಮಟ್ಟದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಕಲಾಮಂದಿರದಲ್ಲಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ‌ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದದ ಅವರು, ನಾಲ್ವಡಿ ಅವರು ನಾಡು ಕಂಡ ಅಪ್ರತಿಮವಾದ ಚೇತನ, ನೂರು ವರ್ಷಗಳ ಹಿಂದೆಯೇ ಕೈಗಾರಿಕೆ, ಶಿಕ್ಷಣ, ನೀರಾವರಿ, ಕೃಷಿಗೆ ಅವರು ನೀಡಿದ ಕೊಡುಗೆ ಅಪಾರ. ಅವರು ನೀಡಿದ ಕೊಡುಗೆ ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅರಮನೆ ಆವರಣದಲ್ಲಿರುವ ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಅಶ್ವರೋಹಿ ದಳ, ಪೊಲೀಸ್ ಬ್ಯಾಂಡ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಲಿದೆ. ಕೆ.ಆರ್. ವೃತ್ತದಲ್ಲಿ ನಾಲ್ವಡಿ ಅವರ ಕುರಿತು ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮೆರವಣಿಗೆ ಸಾಗುವ ಸಂದರ್ಭದಲ್ಲಿ ನಾಲ್ವಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು‌ ಎಂದರು.

7 ರಿಂದ 14 ವರ್ಷ ಹಾಗೂ 15 ರಿಂದ 18 ವರ್ಷದ ಎರಡು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದರು‌.

ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ಉಪಹಾರದ ವ್ಯವಸ್ಥೆಯಾಗಬೇಕು. ಶಿಷ್ಠಾಚಾರದಂತೆ ಎಲ್ಲಾ ಗಣ್ಯರಿಗೆ ಆಹ್ವಾನ ಪತ್ರಿಕೆ ವಿತರಣೆಯಾಗಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ ಮಾಡುವಂತೆ ಅವರು ತಿಳಿಸಿದರು.

ವಿವಿಧ ಸಂಘಟನೆಗಳ ಮುಖ್ಯಸ್ಥರು ಮಾತನಾಡಿ, ಕಾರ್ಯಕ್ರಮದ ದಿನದಂದು ನಾಲ್ವಡಿ ಅವರ ಬಗ್ಗೆ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿ ಆಯ್ಕೆ ಮಾಡುವ ಬಗ್ಗೆ, ವಿವಿಧ ವೃತ್ತಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ನಾಲ್ವಡಿ ಅವರ ಸಾಕ್ಷ್ಯಚಿತ್ರ ಪ್ರದರ್ಶಿಸುವ ಕುರಿತು, ಗ್ರಾಪಂ ಮಟ್ಟದಲ್ಲಿ ನಾಲ್ವಡಿ ಜಯಂತಿ ಆಚರಿಸುವ ಬಗ್ಗೆ ಚರ್ಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ, ಹಿರಿಯ ಸಾಹಿತಿ ಪ್ರೊ. ನಂಜರಾಜ ಅರಸ್, ವಿವಿಧ ಸಂಘಟನೆಗಳ ಮುಖಂಡರಾದ ಎಸ್. ಕೆ. ರಾಜುಗೌಡ, ಬಿ.ಎ.ಶಿವಶಂಕರ್, ಸೋಸಲೆ ಸಿದ್ದರಾಜು, ಜಯಶಂಕರ ಮೇಸ್ತ್ರಿ, ಅರವಿಂದ್ ಶರ್ಮಾ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರಸಭೆ ಅಧ್ಯಕ್ಷರಾಗಿ ಭವ್ಯಾ ಮಂಜುನಾಥ್ ಅವಿರೋಧ ಆಯ್ಕೆ
ಬಿಜೆಪಿ-ಕಾಂಗ್ರೆಸ್‌ ಹೈಡ್ರಾಮ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು