ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಸಂಭ್ರಮಾಚರಣೆ

KannadaprabhaNewsNetwork |  
Published : Jun 10, 2024, 02:03 AM IST
ನರೇಂದ್ರ ಮೋದಿ ಅವರು  ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ವತಿಯಿಂದ ಕಂಪ್ಲಿಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು  | Kannada Prabha

ಸಾರಾಂಶ

ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ದೇಶದ ಜನತೆ ಎನ್ ಡಿ ಎ ಗೆ ಬಹುಮತ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಲು ಪಣ ತೊಟ್ಟಿದ್ದಾರೆ.

ಕಂಪ್ಲಿ: ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿಯಾಗಿ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು.

ಬಿಜೆಪಿ ಕ್ಷೇತ್ರ ಅಧ್ಯಕ್ಷ ಅಳ್ಳಳ್ಳಿ ವೀರೇಶ್ ಮಾತನಾಡಿ, ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ದೇಶದ ಜನತೆ ಎನ್ ಡಿ ಎ ಗೆ ಬಹುಮತ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಲು ಪಣ ತೊಟ್ಟಿದ್ದಾರೆ. ಅದರಂತೆ ಎನ್ ಡಿ ಎ ಮೈತ್ರಿ ಕೂಟದಲ್ಲಿನ ಪಕ್ಷಗಳ ಬೆಂಬಲದಿಂದ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರವನ್ನು ಸ್ವೀಕರಿಸಿದ್ದಾರೆ. ತಮ್ಮ ಪದಗ್ರಹಣದ ಬಳಿಕ ಮೋದಿ ಅವರು ದೇಶದ ಎಲ್ಲ ಸಂಸದರೊಂದಿಗೆ ಒಗ್ಗೂಡಿ ನೂರು ದಿನಗಳ ಒಳಗಾಗಿಯೇ ಜನತೆಗೆ ಉತ್ತಮ ಆಡಳಿತ ನೀಡುವ ಮೂಲಕ ಜನ ಮಾನಸದಲ್ಲಿ ಉಳಿಯುವ ಯೋಜನೆ ರೂಪಿಸಿದ್ದು ಅದರಂತೆ ದೇಶದ ಸಮಗ್ರ ಅಭಿವೃದ್ಧಿ ಗೆ ಶ್ರಮಿಸಲಿದ್ದಾರೆ. ಇನ್ನು ಭಾರತ ದೇಶ ಮತ್ತಷ್ಟು ಅಭಿವೃದ್ಧಿ ರಾಷ್ಟ್ರವಾಗಿ ಹೊರ ಹೊಮ್ಮವುದರಲ್ಲಿ ಯಾವುದೇ ಸಂಶಯವಿಲ್ಲ ಅಲ್ಲದೇ ಮೋದಿ ಅವರ ಆಡಳಿತ ಸುವರ್ಣ ಯುಗವಾಗಲಿದೆ ಎಂದು ತಿಳಿಸಿದರು.

ಇದೇ ವೇಳೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಜಿ.ಸುಧಾಕರ್, ಪುರಸಭೆ ಸದಸ್ಯರಾದ ಸಿ.ಆರ್. ಹನುಮಂತ, ಆರ್.ಆಂಜನೇಯ, ಮುಖಂಡರಾದ ಪಿ.ಬ್ರಹ್ಮಯ್ಯ, ರಾಜರಾವ್, ಬಿ.ಸಿದ್ದಪ್ಪ, ಪುರುಷೋತ್ತಮ್, ಲಿಂಗನಗೌಡ, ಅಗಳಿ ಪಂಪಾಪತಿ, ಶ್ರೀನಿವಾಸ್, ಬಿ.ರಮೇಶ್, ಚಂದ್ರಕಾಂತ ರೆಡ್ಡಿ, ಬಿ.ಕೆ. ವಿರೂಪಾಕ್ಷಿ, ಕಟ್ಟೆ ವಿಶ್ವ, ನಾಗೇಂದ್ರ, ಮುರಳಿ ಮೋಹನ್ ರೆಡ್ಡಿ, ಪ್ರಭು ಸೇರಿದಂತೆ ಬಿಜೆಪಿ ಕಾರ್ಯಕರ್ತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ