ಸುಪ್ರೀಂ ತೀರ್ಪು ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮಾಚರಣೆ

KannadaprabhaNewsNetwork |  
Published : Aug 03, 2024, 12:41 AM IST
೧ಎಚ್‌ವಿಆರ್೫- | Kannada Prabha

ಸಾರಾಂಶ

ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಉಪವರ್ಗೀಕರಣಕ್ಕೆ ಅನುಮತಿ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ಮತ್ತು ಮಹತ್ವದ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಹಾವೇರಿ: ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಉಪವರ್ಗೀಕರಣಕ್ಕೆ ಅನುಮತಿ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ಮತ್ತು ಮಹತ್ವದ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಹಾಗೂ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ, ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರ ಮೇಗಳಮನಿ ಮಾತನಾಡಿ, ಕಳೆದ ಎರಡು ದಶಕಗಳಿಂದ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಿ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಿ ಎಂದು ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಹೋರಾಟ ಮಾಡುತ್ತಾ ಬರಲಾಗಿತ್ತು. ಶೋಷಿತರ ಪರ ನಿಜವಾದ ಕಳಕಳಿ ಹೊಂದಿರುವ ಹಾಲಿ ಸಂಸದರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ದಿಟ್ಟ ನಿರ್ಧಾರದಿಂದ ಸದಾಶಿವ ಆಯೋಗದ ವರದಿಯ ಆಧಾರದ ಮೇಲೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣಗೊಳಿಸಿ ಆದೇಶ ಮಾಡುವ ಮೂಲಕ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ್ದರು.ಈ ಬಗ್ಗೆ ಸುಪ್ರೀಂ ಕೋರ್ಟನಲ್ಲಿ ವಿಚಾರಣೆ ನಡೆಯಿತು. ಗುರುವಾರ ಈ ಪ್ರಕರಣದ ತೀರ್ಪು ಪ್ರಕಟಿಸಲಾಗಿದೆ. ನ್ಯಾಯಮೂರ್ತಿ ತ್ರಿವೇದಿ ಹೊರತುಪಡಿಸಿ ಉಳಿದ ಎಲ್ಲ ನ್ಯಾಯಮೂರ್ತಿಗಳು ಒಳ ಮೀಸಲಾತಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಶೋಷಿತರ ಪರವಾಗಿ ದಿಟ್ಟ ನಿರ್ಣಯ ಕೈಗೊಂಡ ಈ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳು ಋಣಿಯಾಗಿವೆ. ಶೀಘ್ರದಲ್ಲಿಯೇ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷಾತೀತವಾಗಿ ಅಭಿನಂದನಾ ಸಮಾರಂಭ ಆಯೋಜಿಸಲಾಗುವುದು ಎಂದರು.ಮಾದಿಗ ದಂಡೋರ ಹೋರಾಟ ಸಮಿತಿಯ ಅಧ್ಯಕ್ಷ ಸುಭಾಸ್ ಬೆಂಗಳೂರ ಮಾತನಾಡಿ, ಕಳೆದ ಮೂರು ದಶಕಗಳಿಂದ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಸಿದ ಫಲವಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣಕ್ಕೆ ಮುಂದಾಯಿತು. ಈ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ ತೀರ್ಪು ಐತಿಹಾಸಿಕವಾದುದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಅಶೋಕ್ ಮರಿಯಮ್ಮನವರ, ಸಂಜಯ್ ಗಾಂಧಿ ಸಂಜೀವಣ್ಣನವರ, ಫಕ್ಕೀರೇಶ ಬಣಕಾರ, ನಾಗರಾಜ ಬಣಕಾರ, ಸಂತೋಷ ಗುಡ್ಡಪ್ಪನವರ, ತಿರಕಪ್ಪ ಮೇಗಳಮನಿ, ಆನಂದ ಮುರುಡೆಪ್ಪನವರ, ಗೋವಿಂದಪ್ಪ ಹರಿಜನ, ಮಲ್ಲೇಶ ಕಡಕೋಳ, ಪ್ರಕಾಶ ಸೋಮಣ್ಣನವರ, ಚಂದ್ರಶೇಖರ ಇಚ್ಚಂಗಿ, ನಾಗರಾಜ ಶಿಡ್ಲಣ್ಣನವರ ,ಪ್ರಕಾಶ ಮರಬದ ಇತರರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ