ಹನೂರು ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವಕನ್ನಡಪ್ರಭ ವಾರ್ತೆ ಹನೂರು
ಮೋದಿ ಅವರು ದೇಶದ ಪ್ರಧಾನಿಯಾಗಿ 3ನೇ ಬಾರಿಗೆ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜನತೆಗೆ ಸಂತಸ ತಂದಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್ ತಿಳಿಸಿದರು.ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಭಾನುವಾರ ಸಂಜೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದಲ್ಲಿ ಸಂಭ್ರಮಾಚರಣೆ ನಡೆಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ನರೇಂದ್ರ ಮೋದಿ ಅವರು ಕಳೆದ 10 ವರ್ಷದ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮುಲಕ ಉತ್ತಮ ಆಡಳಿತ ನೀಡಿದ್ದು, ಈ ಬಗ್ಗೆ ಜನತೆಯ ಮನ್ನಣೆ ಗಳಿಸಿತ್ತು. ಜತೆಗೆ ಪ್ರಪಂಚದ ಎಲ್ಲಾ ದೇಶದ ನಾಯಕರು ಮೋದಿ ಅವರ ನಾಯಕತ್ವವನ್ನು ಮೆಚ್ಚಿದ್ದರು. ಈ ದೆಸೆಯಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸದ ಸಂಗತಿ. ಇವರ ಅಧಿಕಾರವಧಿಯಲ್ಲಿ ದೇಶದ ಜನತೆಗೆ ಉತ್ತಮ ಆಡಳಿತ ಸಿಗಲಿದೆ. ಜತೆಗೆ ದೇಶವು ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿದೆ. ಹಾಗಾಗಿ ಈ ದಿನ ಐತಿಹಾಸಿಕ ಹಾಗೂ ಸುದಿನವಾಗಿದೆ ಎಂದು ತಿಳಿಸಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ರಾಜ್ಯದಲ್ಲಿ ಹಿರಿಯ ನಾಯಕರ ನೆತೃತ್ವದಲ್ಲಿ ರಾಜ್ಯದಲ್ಲಿ 17 ಸ್ಥಾನವನ್ನು ಗೆಲ್ಲುವುದರ ಮೂಲಕ ಶಕ್ತಿ ನೀಡಿದೆ. ಈ ಹಿನ್ನೆಲೆ ಪ್ರಹ್ಲಾದ ಜೋಶಿ, ಎಚ್.ಡಿ ಕುಮಾರಸ್ವಾಮಿ, ವಿ. ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಮಂತ್ರಿ ಸ್ಥಾನ ದೊರೆತಿರುವುದು ಹೆಮ್ಮೆಯ ಸಂಗತಿ. ಈ ಮೂಲಕ ಮೋದಿ ಅವರು ರಾಜ್ಯಕ್ಕೆ ಉತ್ತಮ ಅವಕಾಶವನ್ನು ನೀಡಿದ್ದಾರೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದಾಗಿ 2 ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಮುಖಂಡರ ಶ್ರಮದಿಂದಾಗಿ ಉತ್ತಮ ಸ್ಥಾನ ಲಭಿಸಿದೆ. ಹಾಗಾಗಿ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಯಲ್ಲೂ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದರ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಮತದ ಅಂತರದಿಂದ ಗೆಲ್ಲಿಸಲು ಹೆಚ್ಚಿನ ಒತ್ತು ನೀಡಬೇಕು ಎಂದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಜತೆಗೂಡಿ ಪಟಾಕಿ ಸಿಡಿಸಿದರಲ್ಲದೇ ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ , ಮುಖಂಡರಾದ , ನಾಗೇಂದ್ರ, ಪುಟ್ಟಸ್ವಾಮೇಗೌಡ, ಜಯಣ್ಣ, ಬೇಕರಿ ರವಿ, ರಾಜು, ವೆಂಕಟೆಶ್, ಕುಮಾರ್ ಹಾಗೂ ಇನ್ನಿತರರು ಇದ್ದರು.