ಬಳ್ಳಾರಿ ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ

KannadaprabhaNewsNetwork |  
Published : Oct 27, 2026, 02:15 AM IST
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಬಳ್ಳಾರಿಯ ವಾಲ್ಮೀಕಿ ಭವನ ಮುಂಭಾಗದ ಪುತ್ಥಳಿಗೆ ಜಿಲ್ಲಾಧಿಕಾರಿ ನಾಗೇಂದ್ರಪ್ರಸಾದ್, ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.  | Kannada Prabha

ಸಾರಾಂಶ

ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ, ಪುಷ್ಪನಮನ ಸಲ್ಲಿಸುವ ಮೂಲಕ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ರಾಮಾಯಣ ಮಹಾಕಾವ್ಯದ ಕರ್ತೃಗೆ ಗೌರವ ಸಲ್ಲಿಸಿದರು.

ಎಸ್ಪಿ ವೃತ್ತ, ವಾಲ್ಮೀಕಿ ಭವನದ ಪುತ್ಥಳಿಗಳಿಗೆ ಪುಷ್ಪಾರ್ಪಣೆ

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳ ಆಚರಣೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ, ಪುಷ್ಪನಮನ ಸಲ್ಲಿಸುವ ಮೂಲಕ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ರಾಮಾಯಣ ಮಹಾಕಾವ್ಯದ ಕರ್ತೃಗೆ ಗೌರವ ಸಲ್ಲಿಸಿದರು.ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಆದರೆ, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಮುದಾಯದ ಯುವಕರು ವಿವಿಧೆಡೆ ಜಯಂತಿ ಆಚರಣೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

ನಗರದ ಎಸ್ಪಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿ ಹಾಗೂ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಪುತ್ಥಳಿಗೆ ಬೆಳಗ್ಗೆಯಿಂದಲೇ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಎಸ್ಪಿ ವೃತ್ತದ ವಾಲ್ಮೀಕಿ ಪುತ್ಥಳಿ ಬಳಿ ಬೆಳಗ್ಗೆಯಿಂದಲೇ ಜನರು ಜಮಾಯಿಸಿದ್ದರು. ಪುಷ್ಪಮಾಲೆಗಳನ್ನು ಅರ್ಪಿಸಿ ಮಹರ್ಷಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. ವಾಲ್ಮೀಕಿ ಮಹರ್ಷಿಯವರ ಆದರ್ಶಗಳು, ಮಾನವೀಯ ಮೌಲ್ಯಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಸತ್ಯ, ಧರ್ಮ, ನ್ಯಾಯ, ತ್ಯಾಗ, ಕರ್ತವ್ಯನಿಷ್ಠೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ರಾಮಾಯಣವು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿದೆ. ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಹಿತ್ಯದ ಸಂದೇಶಗಳನ್ನು ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂಬ ಆಶಯವನ್ನು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ವಿವಿಧ ಮುಖಂಡರು ತಿಳಿಸಿದರು.ಜಿಲ್ಲಾಡಳಿತದಿಂದ ಪುಷ್ಪನಮನ:

ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ನಗರದ ಎಸ್ಪಿ ವೃತ್ತ ಹಾಗೂ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಅದ್ಧೂರಿ ಕಾರ್ಯಕ್ರಮಗಳಿಗೆ ಅವಕಾಶ ನೀಡದೆ, ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗಳಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ:ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹ್ಮದ್ ಹ್ಯಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ್, ಅಪರ ಜಿಲ್ಲಾಧಿಕಾರಿ ಮಹ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ಎಚ್.ಡಿ. ರಾಜೇಶ್ ಉಪಸ್ಥಿತರಿದ್ದರು.ಗ್ರಾಮೀಣ ಭಾಗದಲ್ಲೂ ಜಯಂತಿ ಸಡಗರ:

ಬಳ್ಳಾರಿ ನಗರ ಮಾತ್ರವಲ್ಲದೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಯೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ವಿವಿಧ ಗ್ರಾಮಗಳಲ್ಲಿ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ಸಮಾಜದಲ್ಲಿ ಸಮಾನತೆ, ಸಹೋದರತ್ವ, ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು ಪ್ರಸ್ತುತವಾಗಿವೆ ಎಂಬ ಸಂದೇಶದೊಂದಿಗೆ ಜಯಂತಿ ಆಚರಣೆ ನಡೆಯಿತು.

ಚುನಾವಣೆ ನೀತಿ ಸಂಹಿತೆಯಿಂದಾಗಿ ಜಿಲ್ಲಾಡಳಿತದ ಅಧಿಕೃತ ಕಾರ್ಯಕ್ರಮ ಸರಳವಾಗಿದ್ದರೂ, ವಾಲ್ಮೀಕಿ ಸಮಾಜದ ಜನರ ಉತ್ಸಾಹ ಹಾಗೂ ಶ್ರದ್ಧಾಭಕ್ತಿಗೆ ಕೊರತೆಯಾಗಲಿಲ್ಲ. ಜಿಲ್ಲೆಯಾದ್ಯಂತ ಆದಿಕವಿಯ ಸ್ಮರಣೆ, ಗೌರವ ಸಮರ್ಪಣೆ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನೆರವೇರಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಸಭೆ ವಿಫಲ: ಪರಿಹಾರವಿಲ್ಲ
ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ₹215 ಕೋಟಿ ಅಭಿವೃದ್ಧಿ ಯೋಜನೆ!