-ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ಮಾಹಿತಿ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುರಂಭಾಪುರಿ ಪೀಠದ ನವ ನಿರ್ಮಾಣ ಶಿಲ್ಪಿ ಲಿಂಗ್ಯಕ್ಯ ಶ್ರೀ ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯರ ಪೀಠಾರೋಹಣದ ಶತಮಾನೋತ್ಸವ ಸಮಾರಂಭ ಪಂಚ ಪೀಠಾಧೀಶರ ಸಾನ್ನಿಧ್ಯದಲ್ಲಿ ನ.27ರಂದು ಬೆಳಿಗ್ಗೆ 11 ಗಂಟೆಗೆ ಶ್ರೀಪೀಠದಲ್ಲಿ ನಡೆಯಲಿದೆ ಎಂದು ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಜಗದ್ಗುರು ಶ್ರೀ ಸಿದ್ಧಲಿಂಗ ಶಿವಾಚಾರ್ಯ, ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧ ರಾಮ ಪಂಡಿತಾರಾಧ್ಯ ಶಿವಾಚಾರ್ಯ, ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಹಾಗೂ ಕಾಶೀ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸಮಾರಂಭದ ಸಾನ್ನಿಧ್ಯ ವಹಿಸುವರು.ಮೈಸೂರು ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ 2026ರ ದಿನದರ್ಶಿಕೆ ಬಿಡುಗಡೆ ಮಾಡಲಿದ್ದಾರೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವೀರಶೈವ ಧರ್ಮದ ಕೀರ್ತಿ ಕಳಸ ಸಾಹಿತ್ಯ ಕೃತಿ, ಶಾಸಕ ಟಿ.ಡಿ.ರಾಜೇಗೌಡ ರಂಭಾಪುರಿ ಬೆಳಗು ಪತ್ರಿಕೆ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳ ಜೀವನ ದರ್ಶನ ಕೃತಿ ಬಿಡುಗಡೆಗೊಳಿಸಲಿದ್ದಾರೆ.
ಸಮಾರಂಭದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಮಾಜಿ ಶಾಸಕರಾದ ಡಿ.ಎನ್.ಜೀವರಾಜ್, ಬೆಳ್ಳಿ ಪ್ರಕಾಶ್, ಅ.ಭಾ.ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್, ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಎಂ.ಬಸವರಾಜ ಭಾಗವಹಿಸಲಿದ್ದಾರೆ.ಅ.ಭಾ.ವೀ.ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ನೇತೃತ್ವ ವಹಿಸಲಿದ್ದು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಎಡೆಯೂರು ರೇಣುಕ ಶಿವಾಚಾರ್ಯರು, ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು, ಬಿಳಿಕಿ ರಾಚೋಟೇಶ್ವರ ಶಿವಾಚಾರ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸೂಡಿ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಶಕಾಪುರ ಡಾ.ಸಿದ್ಧರಾಮ ಶಿವಾಚಾರ್ಯರು, ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ದುಗ್ಲಿ-ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯರಿಗೆ ಗುರುರಕ್ಷೆ ನೀಡಲಾಗುವುದು.ಅಂದು ಪ್ರಾತಃಕಾಲದಲ್ಲಿ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳ ಗದ್ದುಗೆ ಸೇರಿದಂತೆ ಶ್ರೀ ಪೀಠದ ಎಲ್ಲ ದೈವಗಳಿಗೆ ಮಹಾರುದ್ರಾಭಿಷೇಕ, ಅಷ್ಟೋತ್ತರ ಮಹಾಮಂಗಲ ನಡೆಯಲಿದೆ ಎಂದು ತಿಳಿಸಿದ್ದಾರೆ. ೨೧ಬಿಹೆಚ್‌ಆರ್ ೨: ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರು.