26, 27ಕ್ಕೆ ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ : ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಭಾಗಿ

KannadaprabhaNewsNetwork |  
Published : Dec 23, 2024, 01:02 AM ISTUpdated : Dec 23, 2024, 12:27 PM IST
ಚಿತ್ರದುರ್ಗ ನಾಲ್ಕನೇ ಪುಟದ ಲೀಡ್  | Kannada Prabha

ಸಾರಾಂಶ

 ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ  ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ  

ಚಿತ್ರದುರ್ಗ: ಡಿ.26, 27 ರಂದು ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ದೇಶದ ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ ನೀಡಿದರು.

ಎಐಸಿಸಿ ಅಧಿವೇಶನ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1924, ಡಿ.26,27 ರಂದು ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಿದ್ದರು. ಈ ಅಧಿವೇಶನಕ್ಕೆ ಈಗ ನೂರು ತುಂಬಿರುವುದರಿಂದ ಶತಮಾನೋತ್ಸವವನ್ನು ಆಚರಿಸಲಾಗುವುದು. ಜಿಲ್ಲೆಯಿಂದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅಧಿವೇಶನಕ್ಕೆ ತೆರಳಬೇಕು. ಮುಂದೆ ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕಾಗಿರುವುದರಿಂದ ಸಂಘಟನೆಗೆ ಒತ್ತು ಕೊಡಬೇಕು ಎಂದರು.

ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ ಮಾತನಾಡಿ, ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆದು ನೂರು ವರ್ಷಗಳಾದ ಹಿನ್ನೆಲೆ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಜಿಲ್ಲೆಯಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಕೇಂದ್ರ ಸಚಿವ ಅಮಿತ್‍ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರೇಳುವ ಬದಲು ದೇವರ ನಾಮಸ್ಮರಣೆ ಮಾಡಿ ಎಂದು ಅಹಂಕಾರದ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ. ಅದೇ ರೀತಿ ಸಿ.ಟಿ.ರವಿ ಲಕ್ಷ್ಮಿ ಹೆಬ್ಬಾಳ್ಕರ್ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಕೀಳು ಪದ ಬಳಸಿರುವುದನ್ನು ಯಾರು ಸಹಿಸುವುದಿಲ್ಲ. ಇವರಿಬ್ಬರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ, ಹನುಮಲಿ ಷಣ್ಮುಖಪ್ಪ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿ ಗೌಡ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜ, ನ್ಯಾಯವಾದಿ ಶಶಾಂಕ್, ಟಿ.ಸ್ವಾಮಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಗ್ಯಾರಂಟಿ ಅನುಷ್ಠಾನಗಳ ಸಮಿತಿ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ತಾಲೂಕು ಅಧ್ಯಕ್ಷ ಆರ್.ಪ್ರಕಾಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಪ್ರಕಾಶ್‍ರಾಮನಾಯ್ಕ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಎ.ಜಾಕಿರ್‌ಹುಸೇನ್ ಇದ್ದರು.

ಕೇಂದ್ರ ಗೃಹ ಸಚಿವ ಅಮಿತ್‍ ಶಾ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನಿಸುವ ಹೇಳಿಕೆ ನೀಡಿದ್ದಾರೆ.  ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಅಸಹ್ಯವಾಗಿ ಮಾತನಾಡಿ ಸ್ತ್ರೀ ಕುಲಕ್ಕೆ ಅವಮಾನಿಸಿರುವುದರ ವಿರುದ್ಧ ಎಲ್ಲರು ಒಗ್ಗಟ್ಟಾಗಿ ಹೋರಾಡಬೇಕು.

ರಾಮಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ