ಕನ್ನಡಪ್ರಭ ವಾರ್ತೆ ಉಡುಪಿ
ಈ ಬಗ್ಗೆ ಬುಧವಾರ, ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ವಿವರಗಳನ್ನು ನೀಡಿದರು.
ನ.17ರಂದು ಬೆಳಗ್ಗೆ 9 ಗಂಟೆಗೆ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಅತಿಥಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆ ತರಲಾಗುವುದು. 10 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಶತಮಾನೋತ್ತರ ರಜತ ಮಹೋತ್ಸವವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶ ನ್ಯಾ. ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾ.ಎನ್.ವಿ. ಅಂಜಾರಿಯಾ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಎಸ್. ಅಬ್ದುಲ್ ನಜೀರ್ ಸಾಹೇಬ್ ಉಪಸ್ಥಿತರಿರುವರು. ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ಇ.ಎಸ್. ಇಂದಿರೇಶ್, 125ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಾರ್ವಜನಿಕ ಸೇವಾ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.ಇದೇ ವೇದಿಕೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ.ಎಂ.ಜಿ. ಉಮಾ, ನ್ಯಾ. ರಾಮಚಂದ್ರ ಡಿ. ಹುದ್ದಾರ್, ನ್ಯಾ.ಟಿ. ವೆಂಕಟೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಗುವುದು.
ಇದೇ ವೇಳೆ ಉಡುಪಿ ವಕೀಲರ ಸಂಘದ ಸದಸ್ಯರಾಗಿ, ನ್ಯಾಯಾಧೀಶರಾಗಿ ಮತ್ತು ಸರಕಾರಿ ಅಭಿಯೋಜಕರಾಗಿ ಆಯ್ಕೆಯಾಗಿ ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಿಗೆ ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು.
ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಮಾತನಾಡಿ, ಇದು ಕೇವಲ ವಕೀಲರಿಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಸಾರ್ವಜನಿಕರು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನಿನ ಬಗ್ಗೆ ಅರಿವನ್ನು ಮೂಡಿಸಿಕೊಳ್ಳಬಹುದು ಎಂದು ಕರೆ ನೀಡಿದರು.
......................
ನ.17 ರಂದು ಬೆಳಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳಿಗೆ ಪೂರ್ಣಕುಂಭ ಸ್ವಾಗತವನ್ನು ನೀಡಿ, ಉಡುಪಿ ಜಿಲ್ಲೆಯ ಎಲ್ಲ ವಕೀಲರು, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಮೆರವಣಿಗೆಯೊಂದಿಗೆ ನ್ಯಾಯಾಲಯದ ಆವರಣಕ್ಕೆ ಕರೆತರಲಾಗುವುದು. ಕಾರ್ಯಕ್ರಮಕ್ಕೆ ಈಗಾಗಲೇ ತಯಾರಿ ನಡೆಯುತ್ತಿದ್ದು, ವೇದಿಕೆ, ನ್ಯಾಯಾಲಯಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಬೇಕು.