ಕನ್ನಡಪ್ರಭ ವಾರ್ತೆ ಮಂಡ್ಯ
ಕಾಮಗಾರಿಯ ಕುಂದು ಕೊರತೆಗಳನ್ನು ಆಲಿಸಲು ಸೆ.೧೯ರಂದು ಬೆಳಗೊಳದ ಶ್ರೀಆಂಜನೇಯ ದೇವಾಲಯದ ಬಳಿ ಬೆಳಗ್ಗೆ ೧೦ ಗಂಟೆಗೆ ರೈತರ ಸಭೆ ಕರೆಯಲಾಗಿದೆ. ರೈತರ ನಿಯೋಗವನ್ನು ರವೀಂದ್ರ ಶ್ರೀಕಂಠಯ್ಯ ಅವರು ದೆಹಲಿಗೆ ಕರೆದೊಯ್ದು ಕೇಂದ್ರ ಸಚಿವರಾದ ಕುಮಾರಸ್ವಾಮಿ, ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿಸಿ ಸಮಸ್ಯೆ ಪರಿಹಾರಕ್ಕೆ ಮಾರ್ಗೋಪಾಯ ಸೂಚಿಸಿದ್ದಾರೆ. ಈ ವಿಚಾರವನ್ನು ಅಂದು ವಿಸ್ತಾರವಾಗಿ ತಿಳಿಸಲು ಸಭೆ ಕರೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮೈಸೂರು- ಕುಶಾಲನಗರ ನಡುವೆ ನಡೆಯುತ್ತಿರುವ ರಾಷ್ಟ್ರೀಯ ಕಾಮಗಾರಿಯಲ್ಲಿ ಸ್ಥಳೀಯರ ಅನುಕೂಲಕ್ಕಾಗಿ ಸರ್ವೀಸ್ ರಸ್ತೆ ನೀಡದೇ ತರಾತುರಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿರುವುದಾಗಿ ಹೇಳಿದರು.ಈ ಹಿಂದೆ ಜಿಲ್ಲಾಧಿಕಾರಿ, ಶ್ರೀರಂಗಪಟ್ಟಣ ಶಾಸಕ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಭೆ ನಡೆಸಿದ್ದರು. ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ಇರಲಿದೆ ಎಂದು ಹೇಳಿದ್ದರು. ಆದರೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಯ ಡಿಪಿಆರ್‌ನಲ್ಲಿ ಸರ್ವೀಸ್ ರಸ್ತೆ ಸೌಲಭ್ಯ ಇರುವುದಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದರು.
ಸಮಸ್ಯೆ ಆಲಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಯ ಮನವರಿಕೆ ಮಾಡಿದ ಹಿನ್ನೆಲೆ. ಸಮಸ್ಯೆ ಬಗೆಹರಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳಿಗೆ ನಿತಿನ್ ಗಡ್ಕರಿ ಸೂಚನೆ ಮೇರೆಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಸಭೆ ಏರ್ಪಡಿಸಲಾಗಿದೆ. ಹೆದ್ದಾರಿಗೆ ಭೂಮಿ ನೀಡಿದ ರೈತರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.