ಉಗ್ರರ ದಾಳಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಶಾಸಕ ರಮೇಶ ಬಂಡಿಸಿದ್ದೇಗೌಡ

KannadaprabhaNewsNetwork |  
Published : Apr 24, 2025, 12:03 AM IST
23ಕೆಎಂಎನ್ ಡಿ19 | Kannada Prabha

ಸಾರಾಂಶ

ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆಯುವ ಶಾಂತಿ ನೆಲಸಿತ್ತು. ಆರ್ಟಿಕಲ್ 370 ತೆಗೆದಿರುವುದು ಅಲ್ಲಿನ ಇಂತಹ ಘಟನೆಗಳು ನಡೆಯಲು ಕಾರಣವಾಗುತ್ತಿದೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳು ಬಲಿಯಾಗಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದುಡುಕಿನ ನಿರ್ಧಾರ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಮೇಲೆ ಉಗ್ರರ ದಾಳಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ದೂರಿದರು.

ತಾಲೂಕಿನ ಚಿಕ್ಕಂಕನಹಳ್ಳಿಯಲ್ಲಿ 9 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರು ಅತಿಯಾದ ಆತ್ಮವಿಶ್ವಾಸ ಹಾಗೂ ಮುಂದಾಗಬಹುದಾದ ಘಟನೆಗಳ ಬಗ್ಗೆ ಯೋಜಿಸದೆ ಕಾಶ್ಮೀರದಲ್ಲಿ ಕೈಗೊಂಡ ನಿರ್ಧಾರಗಳಿಂದಾಗಿ ಇಂದು ಈ ಘಟನೆ ಉತ್ತರ ನೀಡಿದೆ ಎಂದು ಟೀಕಿಸಿದರು.

ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆಯುವ ಶಾಂತಿ ನೆಲಸಿತ್ತು. ಆರ್ಟಿಕಲ್ 370 ತೆಗೆದಿರುವುದು ಅಲ್ಲಿನ ಇಂತಹ ಘಟನೆಗಳು ನಡೆಯಲು ಕಾರಣವಾಗುತ್ತಿದೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳು ಬಲಿಯಾಗಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದುಡುಕಿನ ನಿರ್ಧಾರ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದರು.

ಜಾತಿ ಗಣಿತಿ ಇತ್ತೀಚೆಗೆ ಮಾಡಿದುದ್ದಲ್ಲ. ಕಳೆದ 10 ವರ್ಷಗಳ ಹಿಂದೆ ವೈಜ್ಞಾನಿಕವಾಗಿಯೇ ನಡೆಸಲಾಗಿದೆ. ಆದರೆ, ಇಂದು ಕೆಲ ವರ್ಗದವರು ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಹಿಂದುಳಿದ ವರ್ಗದ ಜನರು ಅವರದೇ ಆದ ಭಾವನೆ ವ್ಯಕ್ತಪಡಿಸಿದ್ದಾರೆ. ಈ ವಿಷಯವಾಗಿ ಏರ್ಪಟ್ಟಿರುವ ಗೊಂದಲ ನಿವಾರಿಸಲು ಸರ್ಕಾರ ಸಮಿತಿ ರಚಿಸಿ ಯಾವುದೇ ವರ್ಗಕ್ಕೆ ತೊಂದರೆಯದ ರೀತಿ ನೋಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಕೇವಲ ಅಲ್ಪಸಂಖ್ಯಾತರ ಪರವಾಗಿದೆ. ಅವರನ್ನು ಒಲೈಕೆ ಮಾಡುತ್ತಿದೆ ಎಂದು ಸಾರ್ವಜನಿಕರಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ಇದಕ್ಕೆ ತಾರ್ಕಿಕ ಅಂತ್ಯ ನೀಡಬೇಕು. ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದೆ ಎಂಬ ಸಂದೇಶ ನೀಡಬೇಕು ಎಂದು ಮನವಿ ಮಾಡಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ