ವಿಕಸಿತ ಭಾರತ ಸಾಕಾರಕ್ಕೆ ಕೇಂದ್ರ ಬಜೆಟ್ ಪೂರಕ : ಕೆ ಜಿ ಬೋಪಯ್ಯ

KannadaprabhaNewsNetwork |  
Published : Feb 04, 2026, 03:00 AM IST
ಬೋಪಯ್ಯ | Kannada Prabha

ಸಾರಾಂಶ

ಸಮಗ್ರ ಭಾರತ ಕಲ್ಪನೆಯನ್ನು ಇಟ್ಟುಕೊಂಡು ಕೇಂದ್ರ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ವಿಕಸಿತ ಭಾರತ ಸಾಕಾರಕ್ಕೆ ಬಜೆಟ್ ಪೂರಕವಾಗಿದೆ ಎಂದು ಮಾಜಿ ಸ್ಪೀಕರ್ ಮತ್ತು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿಸಮಗ್ರ ಭಾರತ ಕಲ್ಪನೆಯನ್ನು ಇಟ್ಟುಕೊಂಡು ಕೇಂದ್ರ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ವಿಕಸಿತ ಭಾರತ ಸಾಕಾರಕ್ಕೆ ಬಜೆಟ್ ಪೂರಕವಾಗಿದೆ ಎಂದು ಮಾಜಿ ಸ್ಪೀಕರ್ ಮತ್ತು ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದರು.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತ ನಿರ್ಮಾಣ ಹಾಗೂ ದೇಶದಲ್ಲಿನ ರೈಲ್ವೆ ಸಂಪರ್ಕ ಹೆಚ್ಚಳದ ದೃಷ್ಟಿಯಿಂದ 7 ಹೈ ಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು ಘೋಷಣೆ ಮಾಡಿದ್ದಾರೆ. ಈ ಕಾರಿಡಾರ್‌ಗಳನ್ನು ದೇಶದ ಪಶ್ಚಿಮ, ದಕ್ಷಿಣ ಮತ್ತು ಪೂರ್ವ ಭಾರತದಾದ್ಯಂತ ಸಾರಿಗೆ ಸಂಪರ್ಕವನ್ನು ಬಲಪಡಿಸಲು ವಿನ್ಯಾಸಗೊಳಿಸಲಾಗಿದ್ದು, ತಂತ್ರಜ್ಞಾನ ಕೇಂದ್ರಗಳನ್ನು ಉತ್ಪಾದನಾ ಕೇಂದ್ರಗಳು ಮತ್ತು ಪ್ರಮುಖ ಜನಸಂಖ್ಯಾ ಸಮೂಹಗಳೊಂದಿಗೆ ಸಂಪರ್ಕಿಸುತ್ತದೆ. ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ ಎಂದು ಹೇಳಿದರು.ಕೇಂದ್ರ ಬಜೆಟ್‌ನಲ್ಲಿ ಕೈಗಾರಿಕೆ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಲ್ಲದೇ, ದುಡಿಯುವ ಕೈಗಳಿಗೆ ಅನುಕೂಲವಾಗಲಿದೆ. ಕೃಷಿ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಶ್ರೀಗಂಧ ಬೆಳೆಗೆ ವಿಶೇಷ ಯೋಜನೆ ಮಾಡಲಾಗಿದೆ. ಪ್ರವಾಸಿ ಮಾರ್ಗದರ್ಶಕರಿಗೆ ತರಬೇತಿ ನೀಡುವ ಯೋಜನೆಯಿಂದಲೂ ಕರ್ನಾಟಕಕ್ಕೆ ಲಾಭವಾಗಲಿದೆ ಎಂದರು.ಕರ್ನಾಟಕ್ಕೆ ಚೆಂಬು ನೀಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಟೀಕೆಗೋಸ್ಕರ ಟೀಕೆ ಮಾಡುವುದು ಸರಿಯಲ್ಲ. ಕೇಂದ್ರದ ಬಜೆಟ್ ಸಮಗ್ರ ಭಾರತದ ಕಲ್ಪನೆಯನ್ನುಟ್ಟುಕೊಂಡು ಮಾಡಿದ್ದು, ಇದು ಸರ್ವ ಸ್ಪರ್ಶಿ ಸರ್ವ ವ್ಯಾಪ್ತಿ ಬಜೆಟ್ ಆಗಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾಗಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದಾರೆ. ಕೈಗಾರಿಕೆ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ. ಸರ್ವರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದು, ತೆರಿಗೆಯನ್ನು ಹೆಚ್ಚಿಸದೇ ಎಲ್ಲ ಜನರಿಗೆ ಸಹಾಯವಾಗುವಂತಹ ರೀತಿಯಲ್ಲಿ ಮಂಡಿಸಿದ್ದಾರೆ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಅರುಣ್ ಕುಮಾರ್, ತಳೂರು ಕಿಶೋರ್, ಮಾದ್ಯಮ ಪ್ರಮುಖ್ ಸಜಿಲ್ ಕೃಷ್ಣ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿದ ಯೋಧ ಸ್ವಗ್ರಾಮಕ್ಕೆ ಆಗಮನ
ಒತ್ತಡದ ಜೀವನಕ್ಕೆ ಸಂಗೀತ ಅವಶ್ಯ