ಹಿರಿಯಡ್ಕ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ

KannadaprabhaNewsNetwork |  
Published : Jul 12, 2026, 03:45 AM IST
ಹಿರಿಯಡ್ಕ ಶಾಲೆಯಲ್ಲಿ ಮಾದಕ ದೃವ್ಯ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ: 2026 ಕಾರ್ಯಕ್ರಮವನ್ನುಆಚರಿಸುತ್ತಿದೆ. ಸಪ್ತಾಹ ಅಂಗವಾಗಿ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಹಿರಿಯಡ್ಕ ಪೊಲೀಸ್ ಠಾಣೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆಯಿತು.

ಉಡುಪಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ: 2026 ಕಾರ್ಯಕ್ರಮವನ್ನುಆಚರಿಸುತ್ತಿದೆ. ಸಪ್ತಾಹ ಅಂಗವಾಗಿ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಹಿರಿಯಡ್ಕ ಪೊಲೀಸ್ ಠಾಣೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅರುಣ ಕುಮಾರ್ ಶೆಟ್ಟಿ ವಹಿಸಿದ್ದರು. ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾದಕ ದ್ರವ್ಯ, ಅವುಗಳಿಂದಾಗುವ ದುಷ್ಪರಿಣಾಮ, ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅರಿವು ಮೂಡಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ. ಆರ್. ಭಾಗವಹಿಸಿದ್ದರು. ಅತಿಥೇಯ ಸಾಲೆಯ ಪ್ರಾಂಶುಪಾಲೆ ಕ್ಲಾರಿನಾ ನಿಕೋಲಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಸೈಬರ್ ಕ್ರೈಮ್ ಠಾಣೆಯ ಪವನ್ ಕುಮಾರ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮತ್ತು ಸೈಬರ್ ಕ್ರೈಂ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾಟಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜೇಶ್ ಹೆಗ್ಡೆ, ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಅನುಷಾ ಕೋಟ್ಯಾನ್, ಶಾಲೆಯ ಆಡಳಿತ ವರ್ಗ, ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಿ
ಝೀನತ್‌ ವಿರುದ್ಧ ಇನ್ನೂ 2 ಪ್ರಕರಣ ದಾಖಲು