ಕೊರಟಗೆರೆ ತಾಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ಸೂಕ್ತ ಬರ ಪರಿಹಾರ ನೀಡಲು ರೈತರ ಮನವಿ

KannadaprabhaNewsNetwork |  
Published : Oct 04, 2026, 01:30 AM IST
ಕೊರಟಗೆರೆ ತಾಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಬೇಟಿ | Kannada Prabha

ಸಾರಾಂಶ

ನಂತರ ತುಂಬಾಡಿ ಗ್ರಾಪಂ ವ್ಯಾಪ್ತಿಯ ಟಿ. ಗೊಲ್ಲಹಳ್ಳಿ ಸಮೀಪ ವಿಬಿ- ಜಿ ರಾಮ್ ಜಿ ಯೋಜನೆಯಡಿ ಮುತ್ತರಾಯನಕಟ್ಟೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ನಂತರ ಅಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಲ್ಲಿ ವಿಬಿ- ಜಿ ರಾಮ್ ಜಿ ಯೋಜನೆ ಬಗ್ಗೆ ಮಾಹಿತಿ ಪಡೆದರು. ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್‌ ಕುಮಾರ್ ಸಾಹು ಅವರ ತಂಡ ತಾಲೂಕಿನ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

ತಾಲೂಕಿನ ಕಂಬದಹಳ್ಳಿ ಗ್ರಾಮದ ಸಮೀಪ ರೈತರು ಬೆಳೆದಂಥ ಬೆಳೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದೇ ಕಂಗಾಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.

ನಂತರ ತುಂಬಾಡಿ ಗ್ರಾಪಂ ವ್ಯಾಪ್ತಿಯ ಟಿ. ಗೊಲ್ಲಹಳ್ಳಿ ಸಮೀಪ ವಿಬಿ- ಜಿ ರಾಮ್ ಜಿ ಯೋಜನೆಯಡಿ ಮುತ್ತರಾಯನಕಟ್ಟೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ನಂತರ ಅಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಲ್ಲಿ ವಿಬಿ- ಜಿ ರಾಮ್ ಜಿ ಯೋಜನೆ ಬಗ್ಗೆ ಮಾಹಿತಿ ಪಡೆದರು. ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಬರ ಅದ್ಯಯನ ತಂಡದಲ್ಲಿ ಎನ್‌ಐಟಿಐ ಆಯೋಗದ ಅಮರಿಂದರ್ ಸಿಂಗ್, ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆ ನಿರ್ದೇಶಕ ಡಾ.ಜೆ.ಹರ್ಷ ಸೇರಿ ಇತರೆ ಸದಸ್ಯರು ಹಾಗೂ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಅಶ್ವಿಜ, ತಹಸೀಲ್ದಾರ್ ಮಂಜುನಾಥ್, ಇಒ ಅಪೂರ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ್‌ ನಾರಾಯಣ್, ಟಿ.ಸಿ.ರಾಮಯ್ಯ, ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚುನಾವಣಾ ಆಯೋಗದಿಂದ ಮತ ಕಳ್ಳತನ: ಸಚಿವ ಪುಟ್ಟರಂಗಶೆಟ್ಟಿ
ಸಂಗೀತ, ನೃತ್ಯದಿಂದ ಒತ್ತಡ ಕಡಿಮೆ: ದಿನೇಶ್ ಗೂಳಿಗೌಡ