ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

KannadaprabhaNewsNetwork |  
Published : Aug 31, 2024, 01:45 AM IST
01 ಕುಂದಾಣ 30 | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಗ್ರಾಪಂ ವ್ಯಾಪ್ತಿಯ ವಿವಿಧ ಘಟಕದ ಕಾರ್ಯ ವೈಖರಿ ಪರಿಶೀಲನೆ ಕನ್ನಡಪ್ರಭ ವಾರ್ತೆ ಕುಂದಾಣ

ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.ಕೇಂದ್ರ ಸರ್ಕಾರದ ೧೬ ನೇ ಹಣಕಾಸು ಆಯೋಗ ಅಧ್ಯಕ್ಷರಾದ ಡಾ.ಅರವಿಂದ ಪನಗಾರಿಯಾ, ಸದಸ್ಯರಾದ ಅಜಯ್ ನಾರಾಯಣ ಝಾ, ಅನ್ನಿ ಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡಾ ಮತ್ತು ಡಾ.ಸೌಮ್ಯ ಕಾಂತಿ ಘೋಷ್ ತಂಡ ಭೇಟಿ ನೀಡಿ ಕೇಂದ್ರ ಹಾಗೂ ರಾಜ್ಯದ ಅನುದಾನಕ್ಕೆ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ಜಾಲಿಗೆ ಗ್ರಾಮ ಪಂಚಾಯಿತಿಯ ಆಯವ್ಯಯ, ವರಮಾನ, ಪಂಚತಂತ್ರ ಪೋರ್ಟಲ್ ಕಾರ್ಯ ವಿಧಾನದ ಬಗ್ಗೆ ಪಂಚಾಯಿತಿ ಅಧ್ಯಕ್ಷ ಎಸ್.ಎಂ. ಆನಂದ್ ಕುಮಾರ್, ಉಪಾಧ್ಯಕ್ಷೆ ಕೆ.ಭವ್ಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಜೊತೆ ಸಮಾಲೋಚಿಸಿ ಮಾಹಿತಿ ಪಡೆದುಕೊಂಡರು. ನಂತರ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಗೊಂಡಿರುವ ಅತ್ಯಾಧುನಿಕ ಗ್ರಂಥಾಲಯ, ನರೇಗಾ ಕೂಲಿ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಮತ್ತು ಅವರ ಶೈಕ್ಷಣಿಕ ಪ್ರಗತಿ ಹೊಂದುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಕೂಸಿನ ಮನೆ ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು. ತ್ಯಾಜ್ಯ ವಿಲೇವಾರಿ ಘಟಕ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ವಿಧಾನ ಬಗ್ಗೆ ಮಾಹಿತಿ ಪಡೆದಕೊಂಡರು.ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕಾರ್ಯದರ್ಶಿ ಪಿ ಸಿ ಜಾಫರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಮಾ ಮಹಾದೇವನ್, ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ರಾಜ್ಯ ಹಣಕಾಸು ಅಧಿಕಾರಿಗಳ ತಂಡ, ತಹಶಿಲ್ಧಾರ್ ಎಚ್.ಬಾಲಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!