ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರದ ಸ್ವನಿಧಿ ಸೇ ಸಮೃದ್ಧಿ

KannadaprabhaNewsNetwork |  
Published : Feb 11, 2024, 01:46 AM IST
ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಕಾರ್ಯಕ್ರಮವನ್ನು  ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್‌.ವಿ.ಮಂಜುನಾಥ್‌ ಮತ್ತಿತರರು ಇದ್ದರು. | Kannada Prabha

ಸಾರಾಂಶ

ಬೀದಿ ಬದಿ ವ್ಯಾಪಾರಿಗಳ ಕುಟುಂಬದವರಿಗೆ ಕೇಂದ್ರ ಸರ್ಕಾರ ಸ್ವನಿಧಿ ಸೇ ಸಮೃದ್ಧಿ ಯೋಜನೆ ಜಾರಿಗೆ ತಂದಿದೆ ಎಂದು ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆಯ ಡೇ ನಲ್ಮ್‌ ತಜ್ಞ ಹರ್ಷ ಹೇಳಿದರು.

- ವ್ಯಾಪಾರಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಯೋಜನೆ ಬಗ್ಗೆ ಹರ್ಷ ಮಾಹಿತಿ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಬೀದಿ ಬದಿ ವ್ಯಾಪಾರಿಗಳ ಕುಟುಂಬದವರಿಗೆ ಕೇಂದ್ರ ಸರ್ಕಾರ ಸ್ವನಿಧಿ ಸೇ ಸಮೃದ್ಧಿ ಯೋಜನೆ ಜಾರಿಗೆ ತಂದಿದೆ ಎಂದು ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆಯ ಡೇ ನಲ್ಮ್‌ ತಜ್ಞ ಹರ್ಷ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಡೇ ನಲ್ಮ್ ಯೋಜನೆಯಡಿ ಸ್ವನಿಧಿ ಸೇ ಸಮೃದ್ಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. 2020ರಲ್ಲಿ ಕೋವಿಡ್ ಕಡಿಮೆಯಾದ ನಂತರ ಬೀದಿ ಬದಿ ವ್ಯಾಪಾರಿಗಳಿಗೆ ಹಣಕಾಸಿನ ನೆರವು ಸಿಗುತ್ತಿರಲಿಲ್ಲ. ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಅವರ ಕುಟುಂಬದವರಿಗೆ ಕೇಂದ್ರ ಸರ್ಕಾರದ ಪಿಎಂ ಸುರಕ್ಷಾ ಭೀಮಾ ಯೋಜನೆ, ಪಿಎಂ ಜೀವನ್ ಜ್ಯೋತಿ ಭೀಮಾ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾರ್ಡ್, ಪಿಎಂ ಜನಧನ್ ಯೋಜನೆ, ಪಿಎಂ ಶ್ರಮಯೋಗಿ ಮಾನ್ ಧನ್ ಯೋಜನೆ, ಕಟ್ಟಡ ಹಾಗೂ ಇತರೆ ನಿರ್ಮಾಣಗಳ ಕಾರ್ಮಿಕರ ನೋಂದಣಿ, ಜನನಿ ಸುರಕ್ಷಾ ಯೋಜನೆ ಮತ್ತು ಪಿಎಂ ಮಾತೃ ವಂದನಾ ಕಲ್ಯಾಣ ಯೋಜನೆ ಸೌಲಭ್ಯಗಳಿವೆ. ನಗದು ರಹಿತ ವಹಿವಾಟುಗಳನ್ನು ಉತ್ತೇಜಿಸಲು ಕ್ಯೂ ಆರ್ ಕೋಡ್ ಗಳನ್ನು ಬ್ಯಾಂಕುಗಳ ಮೂಲಕ ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ. ಬೀದಿ ಬದಿಯಲ್ಲಿ ಪಾನಿಪುರಿ ಮತ್ತು ಗೋಬಿ ಮಂಚೂರಿ ಮಾರಾಟ ಮಾಡುವವರು ಆಹಾರ ಇಲಾಖೆಯಿಂದ ಎಫ್ ಎಸ್ ಎಸ್ ಐ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಬೇಕು. ಇಲ್ಲವಾದಲ್ಲಿ 10 ಸಾವಿರದವರೆಗೆ ದಂಡ ವಿಧಿಸಬಹುದಾಗಿದೆ ಎಂದರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡಿರುವುದು ಅನುಕೂಲವಾಗಿದೆ. ಆದರೆ, ಸರಿಯಾದ ಸಮಯದಲ್ಲಿ ಸಾಲ ನೀಡಲು ಬ್ಯಾಂಕುಗಳು ವಿಳಂಬ ನೀತಿ ಅನುಸರಿಸುತ್ತಿದ್ದು ಇದರ ಬಗ್ಗೆ ಗಮನಹರಿಸಬೇಕು. ಬೀದಿ ಬದಿ ವ್ಯಾಪಾರಿಗಳಿಗೆ 6 ತಿಂಗಳಿ ಗೊಮ್ಮೆ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಮಾತನಾಡಿ, ಕೇಂದ್ರ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಜಾರಿಗೊಳಿಸಿರುವ 8 ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಸದುಪಯೋಗಪಡಿಸಿ ಕೊಳ್ಳ ಬೇಕೆಂದರು.ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗುರುಮೂರ್ತಿ, ಪಪಂ ಸಿಬ್ಬಂದಿ ಎಂ.ಕೆ.ಉಷಾ, ಬಿ.ಲಕ್ಷ್ಮಣಗೌಡ, ಎ.ಡಿ.ಶೃತಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ