ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

KannadaprabhaNewsNetwork |  
Published : Apr 03, 2026, 02:00 AM IST
ಎತ್ತಿನಹೊಳೆ ಯೋಜನೆ | Kannada Prabha

ಸಾರಾಂಶ

ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.

ಕನ್ನಡಪ್ರಭ ವಾರ್ತೆ ನವದೆಹಲಿ

ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.

ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಇದರಿಂದಾಗಿ ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳ 29 ತಾಲೂಕುಗಳ ಸುಮಾರು 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ.

ಈಗಾಗಲೇ ಅರಣ್ಯ ಪ್ರದೇಶದಲ್ಲಿ ಒಪ್ಪಿಗೆ ಇಲ್ಲದೇ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಕಾಮಗಾರಿ ನಡೆಸಿದ ಸ್ಥಳದ ಮೌಲ್ಯದ ಆರು ಪಟ್ಟು ಮೌಲ್ಯವನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಪರಿಸರ ಸಂರಕ್ಷಣೆ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು ಎಂದು ಕೇಂದ್ರ ಹೇಳಿದೆ.

ಅರಣ್ಯ ಭೂಮಿಯ ಪ್ರಮಾಣಕ್ಕೆ ಸಮನಾಗಿ ಅರಣ್ಯೇತರ ಭೂಮಿಯಲ್ಲಿ ಮರ ಬೆಳೆಸಬೇಕು. ಪರಿಹಾರ ಅರಣ್ಯೀಕರಣಕ್ಕಾಗಿ ಗುರುತಿಸಲಾದ ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಬೇಕು. ಯೋಜನೆಗಾಗಿ ಬಳಸುವ ಒಟ್ಟು ಅರಣ್ಯ ಭೂಮಿಯ ಪ್ರಮಾಣ 111.0277 ಹೆಕ್ಟೇರ್ ಮೀರಬಾರದು. ಅಕ್ಕಪಕ್ಕದ ಪ್ರದೇಶದ ಸಸ್ಯ ಮತ್ತು ಪ್ರಾಣಿ ಜೀವಿಗಳಿಗೆ ಯಾವುದೇ ಹಾನಿ ಉಂಟು ಮಾಡುವಂತಿಲ್ಲ. ರಾಜ್ಯ ಸರ್ಕಾರವು ಅರಣ್ಯ ಅನುಮೋದನೆಯ ಷರತ್ತುಗಳ ಅನುಸರಣೆಯ ವರದಿಯನ್ನು ಪ್ರತಿ ವರ್ಷ ಡಿ.31ರಂದು ಸಲ್ಲಿಸಬೇಕು ಎಂದು ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು-ಕುಲಪತಿ ಪಾಟೀಲ್‌
ಮಹಿಳೆಯರು ಪುರುಷರಿಗೆ ಸಮಾನವಾಗಿ ಹೆಜ್ಜೆ ಹಾಕುತ್ತಿರುವುದು ಪ್ರಗತಿಯ ಸೂಚಕ