ಜನಸಾಮಾನ್ಯರ ಹೊರೆ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ: ಸಚಿವ ಲಕ್ಷ್ಮಣ ಸವದಿ

KannadaprabhaNewsNetwork |  
Published : Oct 19, 2026, 02:30 AM IST
ಪ್ರಚಾರ ಸಭೆಯಲ್ಲಿ ಸಚಿವ ಲಕ್ಷ್ಮಣ ಸವದಿ ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ. ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪೆಟ್ರೊಲಿಯಂ ಉತ್ಪನ್ನಗಳನ್ನು ಕಡಿಮೆ ದರದಲ್ಲಿ ಖರೀದಿಸಿ ಗ್ರಾಹಕರಿಗೆ ಹೆಚ್ಚಿನ ದರಕ್ಕೆ ನೀಡಲಾಗುತ್ತಿದೆ.

ಯಲ್ಲಾಪುರ: ಕೇಂದ್ರ ಸರ್ಕಾರ ರೈತರಿಗೆ, ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಬದಲು ಹೊರೆ ಹೆಚ್ಚಿಸುತ್ತಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪದವೀಧರರು ಮತ ಚಲಾಯಿಸುವ ಮೂಲಕ ಬಿಜೆಪಿಗೆ ಎಚ್ಚರಿಕೆಯ ಗಂಟೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ. ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಪೆಟ್ರೊಲಿಯಂ ಉತ್ಪನ್ನಗಳನ್ನು ಕಡಿಮೆ ದರದಲ್ಲಿ ಖರೀದಿಸಿ ಗ್ರಾಹಕರಿಗೆ ಹೆಚ್ಚಿನ ದರಕ್ಕೆ ನೀಡಲಾಗುತ್ತಿದೆ. ರೈತರ, ಜನಸಾಮಾನ್ಯರ ಶ್ರಮದ ಹಣ ಯಾವುದಕ್ಕೂ ಸಂಬಂಧವಿಲ್ಲದ ಮಧ್ಯವರ್ತಿಗಳ ಪಾಲಾಗುತ್ತಿದೆ. ಕೇಂದ್ರ ಸರ್ಕಾರದ ವೈಫಲ್ಯದ ವಿಚಾರಗಳನ್ನು ಮತದಾರರಿಗೆ ಅರಿವು ಮೂಡಿಸುವ ಕಾರ್ಯ ಆಗಬೇಕೆಂದರು.

ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ಈ ಚುನಾವಣೆಯಲ್ಲಿ ಕ್ಷೇತ್ರದ ಶೇ. 65ರಷ್ಟು ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆಯುವುದು ಖಚಿತ ಎಂದರು.

ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರಿ ನೌಕರರ ಸೇವೆ 15- 20 ವರ್ಷಕ್ಕೆ ಸೀಮಿತಗೊಳಿಸಬೇಕೆಂದು ಹೇಳಿರುವುದು ಸರಿಯಲ್ಲ. ಇದನ್ನು ಕಾರ್ಯಕರ್ತರು ಚುನಾವಣೆಯ ದಾಳವಾಗಿ ಬಳಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಮೂಲಕ ಮತಯಾಚನೆ ಮಾಡಬೇಕೆಂದರು.

ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಭಟ್ಟ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ, ಪ್ರಮುಖರಾದ ಶಾರದಾ ರಾಠೋಡ, ವಿಜಯ ಮಿರಾಶಿ, ವೇಣುಗೋಪಾಲ ಮದ್ಗುಣಿ, ನವೀನ ಹೆಗಡೆ, ಪ್ರೇಮಾನಂದ ನಾಯ್ಕ ಇತರರಿದ್ದರು.‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರ ಸಮಸ್ಯೆಗಳ ಬಗ್ಗೆ ಬಿಜೆಪಿಗೆ ಕಾಳಜಿಯಿಲ್ಲ: ಸಚಿವ ಶಿವರಾಜ ತಂಗಡಗಿ
ಇಂದು ಐತಿಹಾಸಿಕ ಕುಕನೂರು ಮಹಾಮಾಯೆ ದೇವಿ ರಥೋತ್ಸವ