ಕೇಂದ್ರದ ಯೋಜನೆಗಳ ಸದ್ಬಳಕೆ ಆಗಬೇಕು: ಆನಂದ್‌

KannadaprabhaNewsNetwork | Published : Jan 22, 2024 2:16 AM

ಸಾರಾಂಶ

ವಿಕಸಿತ ಭಾರತ ಸಂಕಲ್ಪ ರಥಯಾತ್ರೆಯು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು, ಯಾತ್ರೆಯು ಭಾನುವಾರ ಹಾಸನಕ್ಕೆ ಬಂದಾಗ ಹೊಸಲೈನ್ ರಸ್ತೆಯ ಉತ್ತರ ಬಡಾವಣೆ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಉದ್ಘಾಟಿಸಿದರು.

ಹಾಸನಕ್ಕೆ ವಿಕಸಿತ ಭಾರತ ಸಂಕಲ್ಪ ರಥ । ಉತ್ತರ ಬಡಾವಣೆ ಬಳಿ ಕಾರ್ಯಕ್ರಮ । ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಉದ್ಘಾಟನೆಕನ್ನಡಪ್ರಭ ವಾರ್ತೆ ಹಾಸನ

ವಿಕಸಿತ ಭಾರತ ಸಂಕಲ್ಪ ರಥಯಾತ್ರೆಯು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು, ಯಾತ್ರೆಯು ಭಾನುವಾರ ನಗರಕ್ಕೆ ಬಂದಾಗ ಹೊಸಲೈನ್ ರಸ್ತೆಯ ಉತ್ತರ ಬಡಾವಣೆ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಆನಂದ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ, ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ನಮ್ಮ ಬ್ಯಾಂಕಿನಲ್ಲಿ ಹಲವಾರು ಯೋಜನೆಗಳಿವೆ. ಅದರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆಂದು ಪ್ರಧಾನಿಯವರು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ. ಸಣ್ಣ ವ್ಯವಹಾರವಾದರೂ ಕನಿಷ್ಠ ೧೦ ಸಾವಿರ ರು.ದಿಂದಲೂ ಲೋನ್ ಕೊಡಲಾಗುತ್ತಿದೆ. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ವಿಮೆ ಕೂಡ ಇದ್ದು, ವರ್ಷಕ್ಕೆ ಕೇವಲ ೨೦ ರು. ಕಟ್ಟಿದರೆ ಸಾಕು. ವಿಮಾದಾರರು ಅಪಘಾತದಲ್ಲಿ ಮರಣ ಹೊಂದಿದರೆ ೨ ಲಕ್ಷ ರು. ಕುಟುಂಬಕ್ಕೆ ತಲುಪುತ್ತದೆ ಎಂದರು.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಕೂಡ ಜಾರಿಯಲ್ಲಿದ್ದು, ವರ್ಷಕ್ಕೆ ೪೩೬ ರು. ಕಟ್ಟಿದರೆ ತೊಂದರೆ ಆದಾಗ ನಿಮಗೆ ರಕ್ಷಣೆ ಆಗುವುದು. ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ನಿರ್ಲಕ್ಷಿತರಿಗೆ ಸಾಮಾಜಿಕ ಭದ್ರತೆ ನೀಡುವುದಾಗಿದೆ ಎಂದು ಹೇಳಿದರು.

ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ದೇಶದಲ್ಲಿ ಪ್ರಧಾನಿ ಅವರ ನೇತೃತ್ವದ ಸರ್ಕಾರ ಬಂದು ೯ ವರ್ಷ ಕಳೆದಿದೆ. ದೇಶದ ಬಡಜನರು, ಸಾಮಾನ್ಯ ಜನರು, ರೈತರು ಸೇರಿದಂತೆ ಅನೇಕ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನ ಜಾರಿ ಮಾಡಿದ್ದಾರೆ. ಪಿಎಂ ಕೃಷಿ ಸಮ್ಮಾನ್ ಯೋಜನೆ, ಪಿಎಂ ಜೀವನ್ ಜ್ಯೋತಿ, ಪ್ರಧಾನ ಮಂತ್ರಿ ಸುರಕ್ಷ ಭೀಮ ಯೋಜನೆ, ಆಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಸ್ವಸಹಾಯ ಗುಂಪುಗಳಿಗೆ ಸಾಲ ಯೋಜನೆ, ಪಿಎಂ ವಿದ್ಯಾರ್ಥಿ ವೇತನ, ಆಯುಷ್ ಮಾನ್ ಕಾರ್ಡ್ ವಿತರಣೆ, ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೇಂದ್ರದ ಯೋಜನೆಗಳು, ಅದರ ಬಗ್ಗೆ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳ ಬಳಿ ಎರಡು ವಾಹನಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹೇಗೆ ಯೋಜನೆಗಳನ್ನ ಪಡೆಯಬಹುದು ಎನ್ನುವುದನ್ನು ತಿಳಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಹಿಳೆಯರ ಸಬಲೀಕರಣವನ್ನು ಖಾತ್ರಿಪಡಿಸಲಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಬಿಪಿಎಲ್ ಕುಟುಂಬಗಳ ೩೭ ಲಕ್ಷ ಮಹಿಳೆಯರಿಗೆ ಉಚಿತ ಎಲ್ಪಿಜಿ ಅನಿಲ ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯಲ್ಲಿ ೪ ಕೋಟಿಗೂ ಹೆಚ್ಚು ಜನರಿಗೆ ಮುದ್ರಸಾಲ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಗ್ರಾಮೀಣ ಮನೆಗಳಿಗೆ ತಲುಪಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ, ಸಹೀ ಪೋಷಣ್ ದೇಶ್ ರೊಶನ್ ಹಾಗೂ ಪಡಿತರ ಆಹಾರ ವಿತರಣೆ ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಬಿಐ ಬ್ಯಾಂಕಿನ ಮ್ಯಾನೇಜರ್ ಮಂಜುನಾಥ್, ಪ್ರಶಸ್ತಿ ವಿಜೇತ ದಿನೇಶ್, ಭಾರತ್ ಗ್ಯಾಸ್ ಏಜೆನ್ಸಿಯ ಕೃಷ್ಣಾ, ಆರೋಗ್ಯಾಧಿಕಾರಿ ಡಾ. ವಿಜಯಕುಮಾರಿ, ಲಯನ್ಸ್ ಕ್ಲಬ್ ಹಿರಿಯ ಸದಸ್ಯ ಸಿ. ಶಿವಸ್ವಾಮಿ, ಬಿ.ಜಿ. ನಾಗೇಶ್ ಇದ್ದರು.ಫೋಟೋ: ಹಾಸನ ನಗರದ ಹೊಸಲೈನ್‌ ರಸ್ತೆಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ರಥವನ್ನು ಸ್ವಾಗತಿಸಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರ ಕಾರ್ಯಕ್ರಮವನ್ನು ಎಸ್‌ಬಿಐ ಬ್ಯಾಂಕ್‌ ವ್ಯವಸ್ಥಾಪಕ ಆನಂದ್ ಉದ್ಘಾಟಿಸಿದರು.

Share this article