ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ

KannadaprabhaNewsNetwork |  
Published : Feb 11, 2026, 02:00 AM IST
ಕೆಂಗನಾಳ | Kannada Prabha

ಸಾರಾಂಶ

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಟೆಂಡರ್ ಆಹ್ವಾನಿಸಿರುವುದನ್ನು ಸಂಸದ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಟೆಂಡರ್ ಆಹ್ವಾನಿಸಿರುವುದನ್ನು ಸಂಸದ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ.

ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿದ್ದು, ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು, ವಿವರವಾದ ಭೂ-ತಾಂತ್ರಿಕ ತನಿಖೆಗಳಿಗೆ ಮೀಸಲಾದ ಬಜೆಟ್ ನಿಬಂಧನೆಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ. ದಶಕಗಳಿಂದಲೂ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ, ನಿರ್ಣಾಯಕ ಮತ್ತು ಆಡಳಿತಾತ್ಮಕವಾಗಿ ಮೊದಲ ಹೆಜ್ಜೆಯಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಜೊತೆಗೆ ಅಪಾಯಕಾರಿ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆ ಹೆಚ್ಚಿಸುವುದು, ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ಹೇಳಿದ್ದಾರೆ.

ಡಿಪಿಆರ್ ಪ್ರಕ್ರಿಯೆ ಆರಂಭವಾಗಿರುವುದೇ ಈ ಯೋಜನೆ ಕುರಿತು. ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಕಾಲಮಿತಿಯೊಳಗೆ ಮುಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಯಿಂದ ಮಲೆನಾಡು - ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಲಭ್ಯವಾಗಲಿದ್ದು, ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಂಯೋಜನೆ ಮುಂದುವರಿಸುವುದಾಗಿ ಅವರು ಹೇಳಿದ್ದು, ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಈ ಬಹುಕಾಲದ ಮಹತ್ವಪೂರ್ಣ ಯೋಜನೆ, ಯೋಜನಾ ಹಂತದಿಂದ ಕಾರ್ಯರೂಪಕ್ಕೆ ಶೀಘ್ರವಾಗಿ ಸಾಗಲಿ ಎಂಬುದು ಎಲ್ಲರ ಆಶಯವಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗರ್ಭಕಂಠ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ
ಮಹನೀಯರ ಜಯಂತಿಗೆ ದೇಣಿಗೆ ನೀಡುವೆ ಎಂದು ಶಿವಲಿಂಗೇಗೌಡ