ಕಾರ್ಕಳ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಕೇಂದ್ರ ₹ 6 ಕೋಟಿ ಅನುದಾನ: ಸುನಿಲ್‌

KannadaprabhaNewsNetwork |  
Published : Jun 13, 2026, 02:30 AM IST
12ಕೆಪಿಎಲ್5:ಕೊಪ್ಪಳ ನಗರದ ನಗರಸಭೆ ಮುಂದೆ  ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆಯಿಂದ ಜರುಗುತ್ತಿರುವ  ಬಲ್ಡೋಟ ಕಾರ್ಖಾನೆ ಹಟಾವೋ ಹಾಗೂ ಮಾಲಿನ್ಯ ವಿರೋಧಿಸಿ 225ನೇ ದಿನದ ಹೋರಾಟ ಜರುಗಿತು.  | Kannada Prabha

ಸಾರಾಂಶ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ 6 ಕೋಟಿ ರು. ಅನುದಾನ ಮಂಜೂರಾಗಿದ್ದು, ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ₹ 6 ಕೋಟಿ ಅನುದಾನ ಮಂಜೂರಾಗಿದ್ದು, ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.ಕ್ಷೇತ್ರದ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ಹೆಬ್ರಿ ತಾಲೂಕಿನ ಬಚ್ಚಪ್ಪುವಿನಿಂದ ಹೆಬ್ರಿ ಕಡೆಗೆ ಸಾಗುವ ರಸ್ತೆ, ಮುಂಡ್ಕೂರು ಪೇಟೆ ರಸ್ತೆ, ನಿಟ್ಟೆ-ಕೆಮ್ಮಣ್ಣು ಬಪ್ಪಗೋಳಿ ದ್ವಾರದಿಂದ ಕೆಮ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ರಸ್ತೆ, ಅಜೆಕಾರು-ಹೆರ್ಮುಂಡೆ ಚರ್ಚ್ ಸಮೀಪದ ರಸ್ತೆ, ಕಾರ್ಕಳ-ನಾರಾವಿ ಮುಖ್ಯ ರಸ್ತೆಯ ಈದು ಕ್ರಾಸ್ ರಸ್ತೆ ಹಾಗೂ ಪಡುಕುಡೂರು ಶಾಲೆಯಿಂದ ಶಿವಪುರದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತಲಾ ₹1 ಕೋಟಿ ರು.ಗಳಂತೆ ಒಟ್ಟು ₹6 ಕೋಟಿ ಅನುದಾನ ಮಂಜೂರಾಗಿದೆ. ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಗಿತ್ತು ಎಂದು ಶಾಸಕರ ವಿಕಾಸ ಜನಸೇವಾ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಲಿಬೆಟ್ಟ ವರ್ತಕರ ಸಂಘ ವಿಶ್ವ ಪರಿಸರ ದಿನಾಚರಣೆ
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ ಸುಧಾರಣೆ ಆಗ್ರಹ