ಉಡುಪಿ ಅಗ್ನಿಶಾಮಕ ಠಾಣೆ ಅಗ್ನಿಶಾಮಕ ಸತೀಶ್‌ಗೆ ಕೇಂದ್ರ ಗೃಹ ಇಲಾಖೆ ಪದಕ

KannadaprabhaNewsNetwork |  
Published : Feb 23, 2026, 02:45 AM IST
22ಸತೀಶ್ | Kannada Prabha

ಸಾರಾಂಶ

ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ನಿಷ್ಠೆ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ನೀಡುವ ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.

ಉಡುಪಿ: ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ನಿಷ್ಠೆ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ನೀಡುವ ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು. 2005 ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಆರ್.ಎ ಮುಂಡ್ಕೂರ್ ತರಬೇತಿ ವಿದ್ಯಾಲಯದಲ್ಲಿ ತರಬೇತಿ ಪಡೆದು, 2006 ರಲ್ಲಿ ಮೂಡಬಿದ್ರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದರು. 2018 ರಲ್ಲಿ ಮೈಸೂರು ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ಪದೋನ್ನತಿ ವರ್ಗಾವಣೆ ಪಡೆದು ಪ್ರಸ್ತುತ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮ್ಮ ಕರ್ತವ್ಯದ ಅವಧಿಯಲ್ಲಿ ಜನರ ಪ್ರಾಣ ಹಾಗೂ ಆಸ್ತಿಗಳ ರಕ್ಷಣೆಗಾಗಿ ಹಲವು ಪುರಸ್ಕಾರಗಳು ಹಾಗೂ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಾಜಾಥ ವಿಶೇಷ ಪ್ರಚಾರ ಆಂದೋಲನ
ಪಿಯು ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಡಿಸಿ ಸೂಚನೆ