ಮಹಿಳಾ ಸಬಲೀಕರಣಕ್ಕೆ ಕೇಂದ್ರದಿಂದ ಹಲವು ಕಾರ್ಯಕ್ರಮ

KannadaprabhaNewsNetwork |  
Published : Sep 29, 2026, 01:45 AM IST
28ಎಚ್ಎಸ್ಎನ್6 :  | Kannada Prabha

ಸಾರಾಂಶ

ಸಕಲೇಶಪುರ ಮಂಡಲ ಬಿಜೆಪಿ ಹಾಗೂ ಮಹಿಳಾ ಮೋರ್ಚಾ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ನಗರದ ಕುಶಾಲನಗರದ ಅಣ್ಣಪ್ಪಸ್ವಾಮಿ ವೃತ್ತದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಭೇಟಿ ನೀಡಿ, ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಮಹಿಳೆಯರು, ಯುವಕರು, ರೈತರು ಸೇರಿದಂತೆ ವಿವಿಧ ವರ್ಗಗಳ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೂಲಸೌಕರ್ಯ, ಡಿಜಿಟಲ್ ಸೇವೆ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಭಾಗಿತ್ವವೂ ಅಗತ್ಯ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶ ಪ್ರಗತಿಯತ್ತ ಸಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಸಕಲೇಶಪುರ ಮಂಡಲ ಬಿಜೆಪಿ ಹಾಗೂ ಮಹಿಳಾ ಮೋರ್ಚಾ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ನಗರದ ಕುಶಾಲನಗರದ ಅಣ್ಣಪ್ಪಸ್ವಾಮಿ ವೃತ್ತದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಭೇಟಿ ನೀಡಿ, ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಮಹಿಳೆಯರು, ಯುವಕರು, ರೈತರು ಸೇರಿದಂತೆ ವಿವಿಧ ವರ್ಗಗಳ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೂಲಸೌಕರ್ಯ, ಡಿಜಿಟಲ್ ಸೇವೆ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಭಾಗಿತ್ವವೂ ಅಗತ್ಯ ಎಂದು ಹೇಳಿದರು.

‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ವಿವಿಧ ವಿಷಯಗಳನ್ನು ಬಿಂಬಿಸುವ ರಂಗೋಲಿಗಳನ್ನು ಬಿಡಿಸಲಾಗಿದ್ದು, ಉತ್ತಮ ಪ್ರದರ್ಶನ ನೀಡಿದವರಿಗೆ ಶಾಸಕ ಸಿಮೆಂಟ್ ಮಂಜು ಬಹುಮಾನ ವಿತರಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಗಣಪತಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೇತ್ರಾವತಿ ಮಂಜುನಾಥ್, ಸಕಲೇಶಪುರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತಾ ವಿಶ್ವನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್‌, ಮಧು ಬೊಮ್ಮನಕೆರೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಾವರಿ ಯೋಜನೆ ಜಾರಿಗೆ ಸರ್ಕಾರ ಬದ್ಧ
ಕೆರೆಗಳ ಸಂರಕ್ಷಣೆ, ಅಭಿವೃದ್ಧಿಗೆ ಅಗತ್ಯ ಕ್ರಮ