ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿದ್ದ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಪ್ರತಿ ಕ್ವಿಂಟಲ್‌ಗೆ ₹1,616 ದರ ನಿಗದಿ ಮಾಡಿ ಗರಿಷ್ಠ 2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣನ್ನು ಖರೀದಿಸಲು ಕೇಂದ್ರ ಮುಂದಾಗಿದೆ.
ಕನ್ನಡಪ್ರಭ ವಾರ್ತೆ ನವದೆಹಲಿ
ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿದ್ದ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಪ್ರತಿ ಕ್ವಿಂಟಲ್‌ಗೆ ₹1,616 ದರ ನಿಗದಿ ಮಾಡಿ ಗರಿಷ್ಠ2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣನ್ನು ಖರೀದಿಸಲು ಕೇಂದ್ರ ಮುಂದಾಗಿದೆ.ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದಾಗಿ ಸಂಕಷ್ಟದಲ್ಲಿ ಇದ್ದಾರೆ. ಮಾವಿಗೆ ಸರಿಯಾದ ಬೆಲೆ ಸಿಗದ ಕಾರಣ ರಸ್ತೆಗೆ ಮಾವಿನ ಹಣ್ಣನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದಾರೆ. ತಕ್ಷಣ ನೀವು ರೈತರ ಕಷ್ಟಕ್ಕೆ ಸ್ಪಂದಿಸಬೇಕು, ಮಾವಿನ ಹಣ್ಣಿಗೆ ಬೆಂಬಲ ಬೆಲ ಘೋಷಣೆ ಮಾಡಬೇಕು ಎಂದು ರಾಜ್ಯದ ಮಾವು ಬೆಳಗಾರರ ಪರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಪ್ರಲ್ಹಾದ್ ಜೋಶಿ ಅವರು ಪತ್ರ ಬರೆದು ಮನವಿ ಮಾಡಿದ್ದರು.ಈ ಸಂಬಂಧ ಸಚಿವರ ಪತ್ರಕ್ಕೆ ಸಚಿವ ಚೌವ್ಹಾಣ್ ಸಿಂಗ್ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಎಂಎಸ್ಐ ಯೋಜನೆಯ ಅಡಿ ಪ್ರತಿ ಕ್ವಿಂಟಲ್ ಮಾವಿಗೆ ₹1,616 ದರ ನಿಗಡಿ ಮಾಡಿ ಬೆಂಬೆಲ ಬೆಲೆ ಘೋಷಿಸಿದ್ದಾರೆ. ತಮ್ಮ ಮನವಿಯನ್ನು ಸ್ಪಂದಿಸಿದ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಎಕ್ಸ್‌ನಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.