ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅತ್ಯುತ್ತಮಟ್ಟದ್ದು: ಸಾಲಿ

KannadaprabhaNewsNetwork | Published : Mar 18, 2024 1:56 AM

ಸಾರಾಂಶ

ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸುರಪುರ

ಭಾರತೀಯ ಭಾಷೆಗಳ ಉತ್ಕೃಷ್ಟ ಸಾಹಿತಿಗಳನ್ನು ಪ್ರೋತ್ಸಾಹಿಸಲು ನೀಡುವ ಕೇಂದ್ರ ಅಕಾಡೆಮಿ ಪ್ರಶಸ್ತಿ ಅತ್ಯುತ್ತಮಟ್ಟದ್ದಾಗಿರುತ್ತದೆ. ಸಾಹಿತ್ಯ ಕ್ಷೇತ್ರದಲ್ಲಿ ಆಗುವ ಬದಲಾವಣೆಗಳನ್ನು ಗುರುತಿಸುವ ಉದ್ದೇಶ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಗಮನಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ನವದೆಹಲಿ ಕನ್ನಡ ಸಲಹಾ ಸಮಿತಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಹೇಳಿದರು.

ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಭಾರತ ಸರಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಾಗಿದೆ. 2023ರಲ್ಲಿ ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಬಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ ಎಂದರು.

ಭಾರತೀಯ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಕೂಡ ನೀಡಲಾಗುತ್ತದೆ. ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಮೇರು ಸಾಹಿತಿಗಳಾದ ಸಿ. ರಾಜಗೋಪಲಾಚಾರಿ, ತಾರಾಶಂಕರ ದ.ರಾ. ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ವಿ. ಪುಟ್ಟಪ್ಪ, ಕೆ. ಶಿವರಾಮ ಕಾರಂತ, ವಿ.ಕೃ. ಗೋಕಾಕ್, ಪು.ತಿ. ನರಸಿಂಹಚಾರ, ಯು.ಆರ್. ಅನಂತಮೂರ್ತಿ, ಎಸ್.ಎಲ್. ಭೈರಪ್ಪ ಚಂದ್ರಶೇಖರ ಕುಂಬಾರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ. ಇದು ಕನ್ನಡ ಸಾಹಿತ್ಯಕ್ಕೆ ಸಂದ ಗೌಡರವ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿ, ಹಿರಿಯ ಸಾಹಿತಿ ಶ್ರೀನಿವಾಸ ಜಾಲವಾದಿ, ಹೈಕೋರ್ಟ್ ನ್ಯಾಯವಾದಿ ಜೇಮ್ಸ್ ಅಗಸ್ಟಿನ್, ಕನಕಪ್ಪ ವಾಗಣಗೇರಿ, ಜಯಲಲಿತಾ ಪಾಟೀಲ್, ವೆಂಕಟೇಶಗೌಡ, ಎಚ್.ರಾಠೋಡ ಸೇರಿದಂತೆ ಇತರರಿದ್ದರು.

Share this article