ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಹಮಾಲರ ಕಾಲೋನಿ, ನಂದೀಶ ನಗರ ಹಾಗೂ ಜ್ಯೋತಿ ಕಾಲೋನಿಯ ಅಂಗನವಾಡಿ ಕೇಂದ್ರಗಳಲ್ಲಿ ಬಿಜೆಪಿ ಬಾಗಲಕೋಟೆ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯನ್ನು ಸ್ಮರಿಸುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಅಂಗಳದ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರಿಗೆ ಆರೋಗ್ಯ, ಪೌಷ್ಟಿಕಾಂಶ ಮತ್ತು ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಜಾರಿಯಲ್ಲಿದೆ. ಯೋಜನೆಯಡಿ ಮೊದಲ ಜೀವಂತ ಮಗುವಿಗೆ ₹5,000 ಹಾಗೂ ಮಾರ್ಗಸೂಚಿಯಂತೆ 2ನೇ ಮಗು ಹೆಣ್ಣುಮಗುವಾಗಿದ್ದರೆ ₹6,000 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು.ಪೋಷಣ್ ಟ್ರ್ಯಾಕರ್‌ನಲ್ಲಿ ಕೋಟ್ಯಂತರ ಫಲಾನುಭವಿಗಳು ನೋಂದಾಯಿತರಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಪೌಷ್ಟಿಕತೆ ಹಾಗೂ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಅಂಗನವಾಡಿಗಳಲ್ಲಿ ಮಕ್ಕಳು ಹಾಗೂ ತಾಯಂದಿರಿಗೆ ದೊರೆಯುತ್ತಿರುವ ಹಲವು ಸೌಲಭ್ಯಗಳು ಕೇಂದ್ರ ಸರ್ಕಾರದ ಯೋಜನೆಗಳ ಮೂಲಕ ಒದಗುತ್ತಿವೆ. ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಹಣ್ಣು ವಿತರಿಸಲಾಯಿತು. ಕೇಂದ್ರ ಸರ್ಕಾರದ ಪೌಷ್ಟಿಕತೆ, ಆರೋಗ್ಯ, ಮಹಿಳಾ ಕಲ್ಯಾಣ ಹಾಗೂ ಮಾತೃ–ಶಿಶು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಕುರಿತು ತಾಯಂದಿರು ಮತ್ತು ಮಕ್ಕಳಿಗೆ ಸಂವಾದಾತ್ಮಕವಾಗಿ ಮಾಹಿತಿ ನೀಡಲಾಯಿತು.
ಅಂಗನವಾಡಿಗಳ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿ ಜಾರಿಗೊಳಿಸಿದೆ. ಅರ್ಹ ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.