ಹೊಸಕೋಟೆ: ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮೋದಿ ನೆತೃತ್ವದ ಬಿಜೆಪಿ ಸರ್ಕಾರ ಹತ್ತಾರು ಯೋಜನೆಗಳನ್ನು ಸಾಕಾರಗೊಳಿಸಿದ್ದರಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಾ ತಿಳಿಸಿದರು.
ನಗರ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ದೇಶದ ಆಡಳಿತ ಚುಕ್ಕಾಣಿ ಹಿಡಿದ ನಂತರ ಬೇಟಿ ಬಚಾವೋ, ಬೇಟಿ ಪಡಾವೋ, ತ್ರಿವಳಿ ತಲಾಕ್ ನಂತಹ ಹತ್ತಾರು ಮಹಿಳಾ ಪರವಾದ ಯೋಜನೆಗಳ ಅನುಷ್ಠಾನ ಮಾಡಲಾಗಿದೆ. ಹಾಗೆಯೇ ಈ ಭಾರಿ ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ದೇಶಾದ್ಯಂತ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ. ಸಮಾಜದ ಸೇವಾ ಚಟುವಟಿಕೆಗಳ ಮೂಲಕ ಹೆಣ್ಣುಮಕ್ಕಳು ಆರ್ಥಿಕವಾಗಿ ಮುಂದೆ ಬರುವಂತೆ ಪ್ರಧಾನಿ ಮೋದಿಯವರು ಕೆಲವೊಂದು ಕಾರ‍್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಅದನ್ನು ಉಪಯೋಗಿಸಿಕೊಂಡು ಮುಂದೆ ಬರಬೇಕು ಎಂದು ಸಲಹೆ ನೀಡಿದರು.ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಅನುರೆಡ್ಡಿ ಮಾತನಾಡಿ, ಹೆಣ್ಣು ಮಕ್ಕಳಾಗಿ ಹುಟ್ಟಿರುವುದು ನಮ್ಮ ಹೆಮ್ಮೆ. ಪುಣ್ಯದ ಕೆಲಸ. ಹೆಣ್ನನ್ನು ದೇವತೆಗಳಿಗೆ ಹೋಲಿಕೆ ಮಾಡಲಾಗುತ್ತದೆ. ತನ್ನ ಪ್ರಾಣ ಒತ್ತೆ ಇಟ್ಟು ಮಗುವಿಗೆ ಜನ್ಮ ನೀಡುವ ತಾಯಿಯ ಕೆಲಸ ನಿಜಕ್ಕೂ ನಮ್ಮ ಪೂರ್ವ ಜನ್ಮದ ಪುಣ್ಯ. ಅದು ನಮ್ಮ ಭಾಗ್ಯ. ಒಂದು ಮನೆಯಲ್ಲಿ ಶಾಂತಿ ನೆಮ್ಮದಿ ಜೊತೆಗೆ ಗಂಡಸಿನ ಯಶಸ್ಸಿಗೆ ಹೆಣ್ಣು ಕಾರಣಳಾಗಿರುತ್ತಾಳೆ. ಆದ್ದರಿಂದ ಪ್ರತಿಯೊಬ್ಬರೂ ಸಮಾಜದ ವಿವಿಧ ಸ್ಥರಗಳಲ್ಲಿ ಸಾಧನೆ ಮಾಡುವತ್ತ ದಾಪುಗಾಲಿಡಬೇಕು ಎಂದು ಹೇಳಿದರು.
ಇದೇ ವೇಳೆ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ.ಪುಷ್ಪಾ, ಮಾಜಿ ಸಚಿವ ಎಂಟಿಬಿ ನಾಗರಾಜ್ ಪತ್ನಿ ಶಾಂತಕುಮಾರಿ, ನಗರಸಭೆ ಅಧ್ಯಕ್ಷೆ ಆಶಾರಾಜಶೇಖರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶಾಂತಕುಮಾರಿ, ಮಹಿಳಾ ಮೋರ್ಚಾ ಸದಸ್ಯರಾದ ರಾಧಾ, ಸುಜಾತಾ, ಜೀನತ್ ಉನ್ನೀಸ್, ಯಶೋಧಾ, ಗಾಯತ್ರಿ, ರವಿಕಲಾ, ಮಾತಾ ಇತರರು ಉಪಸ್ಥಿತರಿದ್ದರು.ಫೋಟೋ: 11 ಹೆಚ್‌ಎಸ್‌ಕೆ 1
ಹೊಸಕೋಟೆ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಾ, ಜಿಲ್ಲಾಧ್ಯಕ್ಷೆ ಅನುರೆಡ್ಡಿ ಉದ್ಘಾಟಿಸಿದರು.