ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸದ್ಯ ದೇಶದಲ್ಲಿ 54 ಲಕ್ಷ ಗಿಗ್ ಕೆಲಸಗಾರರಿದ್ದಾರೆ, ಇದು ಮುಂದಿನ 10 ವರ್ಷದಲ್ಲಿ 25 ಕೋಟಿಗೇರುವ ಸಾಧ್ಯತೆಗಳಿವೆ. ಗಿಗ್ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಉದ್ದೇಶವಿದೆ, ಅದಕ್ಕಾಗಿ ವಿಶೇಷ ಯೋಜನೆ ರೂಪಿಸುತ್ತಿದ್ದೇವೆ ಎಂದರು.ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.ಪ್ರಸ್ತುತ ದೇಶದಲ್ಲಿ ದುಡಿಯುತ್ತಿರುವ ಸುಮಾರು 80 ಕೋಟಿ ಜನರಲ್ಲಿ 10 ಕೋಟಿ ಜನರಿಗೆ ಮಾತ್ರ ಪಿಎಫ್, ಇಎಸ್‌ಐ ಮತ್ತಿತರ ಸಾಮಾಜಿಕ ಭದ್ರತೆಯ ಯೋಜನೆಯ ಪ್ರಯೋಜನ ದೊರೆಯುತ್ತಿದೆ. ಉಳಿದ 70 ಕೋಟಿ ಕಾರ್ಮಿಕರು ಈ ಸೌಲಭ್ಯ ವಂಚಿತರಾಗಿದ್ದಾರೆ ಎಂದರು.
ಎಲ್ಲ ರಾಜ್ಯಗಳಿಗೆ ಕೇಂದ್ರ ನೆರವು: ಭಾರತದ ಆರ್ಥಿಕತೆಯು ಇಂದು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನದ ಸಾಮೀಪ್ಯವಿದೆ. ಶೀಘ್ರದಲ್ಲೇ ಮೂರನೇ ಸ್ಥಾನ ಪಡೆಯುವುದು ಮೋದಿ ಅವರ ಸಂಕಲ್ಪವಾಗಿದೆ. 2047ರ ವೇಳೆಗೆ ವಿಕಸಿತ ಭಾರತವಾಗಲು ಯಾವುದೇ ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಬಾರದು ಎಂಬುದು ಮೋದಿಯವರ ಸಂಕಲ್ಪ. ಅದಕ್ಕಾಗಿ ತಾರತಮ್ಯ ರಹಿತ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನಗಳನ್ನು ಕೊಡುತ್ತಿದೆ ಎಂದರು.
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಯತೀಶ್‌ಆರ್ವಾರ್, ಹರೀಶ್ ಕಂಜಿಪಿಲಿ, ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ, ಸಂಜಯ ಪ್ರಭು, ವಸಂತ ಪೂಜಾರಿ, ರೂಪಾ ಡಿ.ಬಂಗೇರ ಇದ್ದರು.---------------------ಆರ್‌ಸಿಬಿ ದುರಂತ ಮರೆಮಾಚಲು ಜಾತಿ ಮರು ಗಣತಿಬೆಂಗಳೂರಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭ 11 ಮಂದಿ ಸಾವು ಸಂಭವಿಸಿದ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಹೈಕಮಾಂಡ್ ಜತೆ ಸೇರಿ ಜಾತಿ ಮರುಗಣತಿಯ ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆಸಿದರು.ಲಿಂಗಾಯಿತರು, ಬ್ರಾಹ್ಮಣರು ಸಹಿತ ಎಲ್ಲ ಜಾತಿಗಳನ್ನು ಒಡೆಯುವ ಕೆಲಸವನ್ನು ಈ ಜಾತಿಗಣತಿಯ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರ ಮಾಡುತ್ತಿದೆ. ಇದರ ಅಂತಿಮ ಉದ್ದೇಶ ಅಲ್ಪಸಂಖ್ಯಾತರ ಸಂಖ್ಯೆ ಅಧಿಕ ತೋರಿಸಿ ಅವರಿಗೆ ಅಧಿಕ ಪ್ರಮಾಣದ ಮೀಸಲಾತಿ ಒದಗಿಸುವುದು ಆಗಿದೆ ಎಂದರು.
ಕೇಂದ್ರ ಜೊತೆ ರಾಜ್ಯ ಅಸಹಕಾರ: ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ. ರೈಲ್ವೆ, ಮೆಟ್ರೋ, ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ ಸೌಲಭ್ಯ ವಿಸ್ತರಣೆಗೆ ರಾಜ್ಯ ಸರ್ಕಾರ ಅಗತ್ಯ ಜಮೀನು ಒದಗಿಸುತ್ತಿಲ್ಲ. ರಾಜ್ಯದ ಜಿಲ್ಲಾಧಿಕಾರಿಗಳು ಸಹಕಾರ ಕೊಡುತ್ತಿಲ್ಲ. ನೀತಿ ಆಯೋಗದ ರಾಜ್ಯದ ಸಭೆಗಳಿಗೆ ಮುಖ್ಯಮಂತ್ರಿಗಳು ಹಾಜರಾಗುವುದಿಲ್ಲ. ಸಭೆಯಲ್ಲಿ ರಾಜ್ಯದ ಬೇಡಿಕೆಗಳನ್ನು ಮುಂದಿಡಬೇಕಾದ ಮುಖ್ಯಮಂತ್ರಿಯವರು ಗೈರು ಹಾಜರಾದರೆ ನಷ್ಟವಾಗುವುದು ಜನರಿಗೆ ಎಂದು ಅವರು ಆಕ್ಷೇಪಿಸಿದರು.ಸಿದ್ದರಾಮಯ್ಯ ಅವರು ಗ್ಯಾರಂಟಿ ಹೆಸರಿನಲ್ಲಿ ಸುಮ್ಮನೆ ಡ್ರಾಮಾ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭ ಡ್ರಾಮಾ ಮಾಡೋಣ. ಆದರೆ ಇತರ ಸಂದರ್ಭ ಅಭಿವೃದ್ಧಿ ಕೆಲಸಗಳಿಗೆ ಗಮನ ಕೊಡೋಣ ಎಂದು ಅವರು ಸಲಹೆ ನೀಡಿದರು.