ಬರ ಪರಿಸ್ಥಿತಿಯ ಗಂಭೀರತೆ ಕೇಂದ್ರ ತಂಡಕ್ಕೆ ಮನವರಿಕೆ

KannadaprabhaNewsNetwork |  
Published : Oct 05, 2026, 01:15 AM IST
ಬರ ಪರಿಸ್ಥಿತಿಯ ಗಂಭೀರತೆ ಕೇಂದ್ರ ತಂಡಕ್ಕೆ ಮನವರಿಕೆ: ಶಿವಲಿಂಗೇಗೌಡ, ಲತಾಕುಮಾರಿ | Kannada Prabha

ಸಾರಾಂಶ

ಅರಸೀಕೆರೆ ತಾಲೂಕಿನ ವಿವಿಧೆಡೆ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಮಳೆಯ ಕೊರತೆಯಿಂದ ರೈತರು ಹಾಗೂ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ಮಲ್ಲಾಪುರ, ಬಾಣಾವರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಕೇಂದ್ರ ತಂಡದ ಅಧಿಕಾರಿಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಾಲೂಕಿನಲ್ಲಿನ ಬರದ ತೀವ್ರತೆಯನ್ನು ವಿವರಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ವಿವಿಧೆಡೆ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಮಳೆಯ ಕೊರತೆಯಿಂದ ರೈತರು ಹಾಗೂ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ಮಲ್ಲಾಪುರ, ಬಾಣಾವರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಕೇಂದ್ರ ತಂಡದ ಅಧಿಕಾರಿಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಾಲೂಕಿನಲ್ಲಿನ ಬರದ ತೀವ್ರತೆಯನ್ನು ವಿವರಿಸಿದರು.ಪರಿಶೀಲನೆ ವೇಳೆ ಮಾತನಾಡಿದ ಸಚಿವ ಕೆ. ಎಂ. ಶಿವಲಿಂಗೇಗೌಡ, ಅರಸೀಕೆರೆ ತಾಲೂಕಿನಲ್ಲಿ ಈ ಪ್ರಮಾಣದ ಬರ ಪರಿಸ್ಥಿತಿಯನ್ನು ಹಿಂದೆಂದೂ ಕಂಡಿರಲಿಲ್ಲ. ಸಕಾಲದಲ್ಲಿ ಮಳೆಯಾಗದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ತೆಂಗು ಬೆಳೆ ಕೂಡ ತೇವಾಂಶದ ಕೊರತೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ ಎಂದು ಕೇಂದ್ರ ತಂಡದ ಅಧಿಕಾರಿಗಳ ಗಮನಕ್ಕೆ ತಂದರು.ಮಳೆಯ ಅಭಾವದಿಂದ ತೆಂಗಿನ ಮರಗಳು ಒಣಗುತ್ತಿದ್ದು, ಇಳುವರಿ ಗಣನೀಯವಾಗಿ ಕುಸಿದಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ, ನೀರಿನ ಸಮಸ್ಯೆ ಹಾಗೂ ರೈತರ ಸಂಕಷ್ಟವನ್ನು ಪರಿಗಣಿಸಿ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಸಚಿವರು ಕೇಂದ್ರ ತಂಡಕ್ಕೆ ಮನವಿ ಮಾಡಿದರು.ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಕ್ಷೇತ್ರದ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಕೇಂದ್ರ ತಂಡದ ಅಧಿಕಾರಿಗಳಿಗೆ ವಿವರಿಸಿದರು. ವಿವಿಧ ತಾಲೂಕುಗಳಲ್ಲಿ ಮಳೆಯ ಪ್ರಮಾಣ ಕುಸಿದಿರುವುದು, ಬೆಳೆಗಳಿಗೆ ಅಗತ್ಯವಾದ ತೇವಾಂಶ ದೊರೆಯದೆ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬರದಿಂದ ಉಂಟಾಗಿರುವ ನಷ್ಟದ ಕುರಿತು ಸಮಗ್ರ ಮಾಹಿತಿ ನೀಡಿದರು.ಜಿಲ್ಲೆಯ ವಾಸ್ತವಿಕ ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಸ್ಥಳದಲ್ಲೇ ಪರಿಶೀಲಿಸಿ, ರೈತರ ಸಂಕಷ್ಟವನ್ನು ಮನಗಂಡು ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಈ ವೇಳೆ ಅಧಿಕಾರಿಗಳು ವಿವಿಧ ಗ್ರಾಮಗಳ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಸ್ಪರ್ಧೆ ಎದುರಿಸುವ ಆತ್ಮವಿಶ್ವಾಸ ಬೆಳೆಸುವುದು ಮುಖ್ಯ
ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ