ಕೇಂದ್ರ ಪುರಸ್ಕೃತ ಯೋಜನೆಗಳು ಅರ್ಹರಿಗೆ ತಲುಪಲಿ: ಸಿ.ಸಿ. ಪಾಟೀಲ

KannadaprabhaNewsNetwork |  
Published : Jan 07, 2024, 01:30 AM IST
ಹೊಳೆಆಲೂರ ಸಮೀಪದ ಮೆಣಸಗಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಶಾಸಕರು ಸಿ.ಸಿ.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿ ಮಾಡುತ್ತಿರುವ ಎಲ್ಲಾ ಯೋಜನೆಗಳು ದೇಶದ ಪ್ರತಿ ಗ್ರಾಮದ ಅರ್ಹ ಫಲಾನುಭವಿಯನ್ನು ತಲುಪುವಂತಾಗಲಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಹೊಳೆಆಲೂರ: ಕೇಂದ್ರ ಸರ್ಕಾರದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿ ಮಾಡುತ್ತಿರುವ ಎಲ್ಲಾ ಯೋಜನೆಗಳು ದೇಶದ ಪ್ರತಿ ಗ್ರಾಮದ ಅರ್ಹ ಫಲಾನುಭವಿಯನ್ನು ತಲುಪುವಂತಾಗಲಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸಮೀಪದ ಮೆಣಸಗಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಮಹಿಳೆಯರ ಸಬಲೀಕರಣವನ್ನು ಖಾತ್ರಿ ಪಡಿಸುವುದಕ್ಕಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಸಹಿ ಪೋಶನ್ ದೇಶ್ ರೋಷನ್ ಯೋಜನೆ ಇಂತಹ 10 ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆಯುಷ್ಮಾನ್ ಭಾರತ ಯೋಜನೆ ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣಾ ಯೋಜನೆಯಾಗಿದೆ. ದೇಶದ ಉದ್ದಗಲಕ್ಕೂ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳ ಮೂಲಕ ಉತ್ತಮ ಗುಣಮಟ್ಟದ ಔಷಧಗಳು ಜನರಿಗೆ ಕೈಗೆಟುವ ದರದಲ್ಲಿ ಲಭ್ಯವಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಭೂತಪೂರ್ವದ ಬದಲಾವಣೆಯಾಗಿ ಎಲ್ಲರೂ ಬ್ಯಾಂಕಿನ ವ್ಯಾಪ್ತಿಗೆ ಒಳಪಡುವಂತಾಗಿದೆ ಎಂದು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಈ ವೇಳೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ಪ್ರಧಾನ ಮಂತ್ರಿ ವಿಮಾ ಯೋಜನೆ ಅಡಿಯಲ್ಲಿ ವಿಮಾದಾರ ನೀಲವ್ವ ಚಲವಾದಿ ಅವರು ತಮ್ಮ ಪತಿ ನಿಧನ ನಂತರ ತಮಗೆ ಎರಡು ಲಕ್ಷ ರುಪಾಯಿ ಬ್ಯಾಂಕಿನಿಂದ ವಿಮೆ ಹಣ ಜಮಾ ಆಗಿರುವ ಕುರಿತು ಆ ಮೂಲಕ ತಮ್ಮ ಕುಟುಂಬಕ್ಕೆ ಆಗಿರುವ ಅನುಕೂಲದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಈಶ್ವರಪ್ಪ ಮುದೇನೂರು ವಹಿಸಿದ್ದರು. ರಾಜಮಟ್ಟದ ಬ್ಯಾಂಕರ್ಸ್ ಕಮಿಟಿಯಿಂದ ಎಲ್.ಡಿ.ಎಂ, ಆರೋಗ್ಯ ಇಲಾಖೆ ಸಿಬ್ಬಂದಿ ಪಂಚಾಯಿತಿ, ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ ಭಾಗವಹಿಸಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ