ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಬದ್ಧ: ಜೋಶಿ

KannadaprabhaNewsNetwork |  
Published : Oct 17, 2026, 02:00 AM IST
ಪ್ರಹ್ಲಾದ ಜೋಶಿ | Kannada Prabha

ಸಾರಾಂಶ

ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳು ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪರಿಶೀಲನೆಗೆ ಕೇಂದ್ರದಿಂದ ಉನ್ನತ ಮಟ್ಟದ ಸ್ವತಂತ್ರ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ.

ಗದಗ: ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಕೇಂದ್ರ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಆತಂಕಕ್ಕೆ ಒಳಗಾಗದೆ ಸಮಾಧಾನದಿಂದ ಇರಬೇಕು. ಕೇಂದ್ರ ಏನೆಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ ಎನ್ನುವ ಬಗ್ಗೆ ಈಗಾಗಲೇ ವಿವರವಾಗಿ ತಿಳಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳು ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪರಿಶೀಲನೆಗೆ ಕೇಂದ್ರದಿಂದ ಉನ್ನತ ಮಟ್ಟದ ಸ್ವತಂತ್ರ ಸಮಿತಿಯನ್ನು ಈಗಾಗಲೇ ರಚಿಸಲಾಗಿದೆ. ನವರಾತ್ರಿ ಮುಗಿದ ತಕ್ಷಣ, ಸೋಮವಾರವೇ ಈ ಸಮಿತಿಯ ಮೊದಲ ಸಭೆ ನಡೆಯಲಿದ್ದು, ಅಧಿಕಾರಿಗಳ ತಂಡ ಸ್ಥಳೀಯವಾಗಿ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಲಿದೆ ಎಂದರು.

ಜತೆಗೆ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಸಕಾಲದಲ್ಲಿ ಬಾಕಿ ಬಿಲ್ ಪಾವತಿಯಾಗುವಂತೆ ಮಾಡಲು ಕೇಂದ್ರ ಸರ್ಕಾರ ಎಥೆನಾಲ್ ಖರೀದಿಯನ್ನು 38 ಕೋಟಿ ಲೀಟರ್‌ನಿಂದ 1200 ಕೋಟಿ ಲೀಟರ್‌ಗೆ ಹೆಚ್ಚಿಸಿದೆ. ಒಟ್ಟು 30 ಲಕ್ಷ ಟನ್ ಸಕ್ಕರೆ ಉತ್ಪನ್ನವನ್ನು ಎಥೆನಾಲ್‌ಗೆ ಡೈವರ್ಟ್ ಮಾಡಲಾಗಿದೆ. ಇದರಲ್ಲಿ ಗರಿಷ್ಠ 12.5 ಲಕ್ಷ ಟನ್ ಪಾಲನ್ನು ಕರ್ನಾಟಕಕ್ಕೇ ನೀಡಲಾಗಿದೆ ಎಂದು ಅಂಕಿ-ಅಂಶ ಸಹಿತ ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ಹೊಣೆಗಾರಿಕೆಯನ್ನು ಪ್ರಸ್ತಾಪಿಸಿದ ಸಚಿವರು, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌ನಂತೆ ಕರ್ನಾಟಕ ಸರ್ಕಾರ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಖಾನೆಗಳಲ್ಲಿ ನಡೆಯುವ ತೂಕದ ಮೋಸ ಹಾಗೂ ಶೇ. 8ರಿಂದ 9ರಷ್ಟು ಕಟಿಂಗ್ ಕಡಿತವನ್ನು ನಿಯಂತ್ರಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದ್ದು, ರೈತರಿಗೆ ಅನ್ಯಾಯವಾಗದಂತೆ ತಡೆಯಲು ಅಗತ್ಯ ಬಿದ್ದರೆ ಕೇಂದ್ರದಿಂದಲೇ ವಿಶೇಷ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೃತ ಸಿಐಎಸ್‌ಎಫ್ ಸಿಬ್ಬಂದಿ ಕುಟುಂಬಕ್ಕೆ ₹1 ಕೋಟಿ ವಿಮೆ
ಆತ್ಮನಿರ್ಭರ ಭಾರತದ ನೌಕಾ ಶಕ್ತಿಗೆ ಐಎನ್‌ಎಸ್ ಸಮರ್ಥಕ್ ಬಲ