ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ 25 ಲಕ್ಷ ವಿದ್ಯಾರ್ಥಿಗಳು ಬಾಧಿತರಾಗಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಮುಂದಿನ ಪ್ರಜೆಗಳಾಗಬೇಕಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರದ ಬಿಜೆಪಿ ಮಾರಕವಾಗಿದೆ ಎಂದರು.ಇದು ಮುಂದಿನ ದಿನಗಳಲ್ಲಿ ದೇಶದ ಭವಿಷ್ಯವನ್ನು ಕರಾಳತೆಗೆ ತಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ನೀಟ್ ಪರೀಕ್ಷೆ ಎಂಬುದು ವ್ಯಾಪಾರೀಕರಣವಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ಪ್ರಭಾವಶಾಲಿ ವ್ಯಕ್ತಿಗಳು ಕೋಚಿಂಗ್ ಸೆಂಟರ್ ಎಂದು ಪ್ರತಿವರ್ಷ ಲಕ್ಷಾಂತರ ವಿಧ್ಯಾರ್ಥಿಗಳಿಂದ ಕೋಟಿ, ಕೋಟಿ ಹಣ ಲೂಟಿ ಮಾಡುವ ದಂದೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಈ ದೇಶದ ಮಕ್ಕಳ ಬಗ್ಗೆ ಕಾಳಜಿ ಇಲ್ಲದ ಪ್ರಧಾನಿಯಾಗಲಿ, ಕೇಂದ್ರ ಸರ್ಕಾರವಾಗಲಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಗಲಿ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆಕ್ರೋಶ ಹೊರಹಾಕಿದರು.ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ವಿರುದ್ಧ, ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನ ಮಂತ್ರಿಗಳು, ಕೇಂದ್ರ ಗೃಹಸಚಿವರು ಮತ್ತು ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಕೆಪಿಸಿಸಿ ಜಿಲ್ಲಾ ವಕ್ತಾರ ತೆನ್ನಿರ ಮೈನಾ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಹನೀಫ್ , ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಆಧ್ಯಕ್ಷರಾದ ಕೊಳ್ಳಿಮಾಡ ಪ್ರಶಾಂತ್, ಪ್ರಚಾರ ಸಮಿತಿ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಂಕಜ, ಬಾನಂಡ ಪ್ರಥ್ಯು, ಪೆಮ್ಮಂಡ ಕೆ.ಪೊನ್ನಪ್ಪ, ಕುಶಾಲಪ್ಪ, ಗೋಣಿಕೊಪ್ಪ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್, ಬಗರ್ ಹುಕುಂ ಸಮಿತಿ ಅಧ್ಯಕ್ಷರಾದ ಲಾಲ ಅಪ್ಪಣ್ಣ ಪ್ರಮುಖರಾದ ಆಶಾ ಪೂಣಚ್ಚ, ಎ.ಜೆ.ಬಾಬು, ವಿಲ್ಸನ್, ಕೋಳೆರ ಭಾರತಿ ಸೇರಿದಂತೆ ವಿವಿಧ ಘಟಕಗಳು, ಡಿಸಿಸಿ ಹಾಗೂ ಬ್ಲಾಕ್ ಸಮಿತಿ ಪ್ರಮುಖರು, ವಲಯ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.