ಹಲವು ಯೋಜನೆಗಳಿಂದ 13 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರಕ್ಕೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಆದರೆ, ಕೇಂದ್ರ ಸರ್ಕಾರದ ಸ್ವನಿಧಿ ಸೇರಿದಂತೆ ಹಲವು ಯೋಜನೆಗಳು ನಿಜವಾದ, ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, ಇದರಿಂದ ದೇಶದ 13 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರಬರಲು ಸಾಧ್ಯವಾಗಿದೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಿಳಿಸಿದರು.
ನಗರದ ನಿಟುವಳ್ಳಿಯಲ್ಲಿ ಬುಧವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ ಎಂದರು.ಬೀದಿ ಬದಿ ವ್ಯಾಪಾರಸ್ಥರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯು ನಗರ ಮತ್ತು ಪಟ್ಟಣ ಪ್ರದೇಶಗಳ ಬೀದಿ ಬದಿ ವ್ಯಾಪಾರಸ್ಥರಿಗೆ ವರದಾನವಾಗಿದೆ. ನಗರ ಪ್ರದೇಶದ ನಿವಾಸಿಗಳಿಗೆ ಕೇಂದ್ರವು ಜಾರಿಗೆ ತಂದ ಪ್ರಧಾನ ಮಂತ್ರಿ ನಗರ ವಸತಿ ಯೋಜನೆ, ಸ್ವನಿಧಿ, ಸ್ಟಾಂಡ್ ಅಪ್ ಇಂಡಿಯಾ, ಅಮೃತ್ ಯೋಜನೆ, ಉಜ್ವಲಾ, ಪ್ರಧಾನ ಮಂತ್ರಿ ಜನೌಷಧಿ ಸೇರಿ 50ಕ್ಕೂ ಯೋಜನೆಗಳ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಪ್ರದೇಶವೂ ಸೇರಿ ನಗರ, ಪಟ್ಟಣ ಪ್ರದೇಶದಲ್ಲಿ ಪಿಎಂ ವಿಶ್ವಕರ್ಮ, ಮುದ್ರಾ, ಜನಧನ್, ಆಯುಷ್ಮಾನ್ ಭಾರತ್ ಸೇರಿ 70 ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಕೇಂದ್ರವು ಜಾರಿಗೊಳಿಸಿದೆ. ಯೋಜನೆಗಳನ್ನು ಜನರು ಸದ್ಭಳಕೆ ಮಾಡಿ ಆರ್ಥಿಕವಾಗಿ ಸಬಲರಾಗಬೇಕು. ಕೇಂದ್ರದ ಯೋಜನೆಗಳ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜನರಿಗೆ ಸೌಲಭ್ಯ, ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಯೋಜನೆಯಿಂದ ಹೊರಗುಳಿದವರ ಯೋಜನೆ ವ್ಯಾಪ್ತಿಗೆ ತರಬೇಕು ಎಂದು ಸೂಚಿಸಿದರು.
ನಯಾಪೈಸೆ ಹಣ ಕೊಡಬೇಕಾಗಿಲ್ಲ
ಡಾ.ಜಿ.ಎಂ.ಸಿದ್ದೇಶ್ವರ, ಸಂಸದ