ರಸ್ತೆ ಅಭಿವೃದ್ಧಿಗೆ ಕೇಂದ್ರ 22 ಕೋಟಿ ರು.: ಒಡೆಯರ್

KannadaprabhaNewsNetwork |  
Published : Jun 11, 2026, 01:15 AM IST
ಸಂಸದ ಯದುವೀರ್ | Kannada Prabha

ಸಾರಾಂಶ

ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 22 ಕೋಟಿ ರು. ಮಂಜೂರು ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು 22 ಕೋಟಿ ರು. ಮಂಜೂರು ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.ಮಂಜೂರಾಗಿರುವ ಕಾಮಗಾರಿಗಳು: ಕೊಡ್ಲಿಪೇಟೆ-ಹೆಬ್ಬಾಲೆ ರಸ್ತೆ (ಎಸ್‌ಎಚ್-244) ಕಿ.ಮೀ. 16.70 ರಿಂದ 30 ರವರೆಗೆ, ಗೋಪಾಲಪುರ-ಬಾಣಾವರ ಹೆಬ್ಬಾಲೆ ಮಾರ್ಗವಾಗಿ ಮುಳ್ಳೂರು ಹಾಗೂ ಮಾಳಂಬಿ (ಆಯ್ದ ಭಾಗಗಳು) ಸಂಪರ್ಕಿಸುವ ಸೋಮವಾರಪೇಟೆ ತಾಲೂಕಿನ ರಸ್ತೆ ಅಭಿವೃದ್ಧಿಗೆ 6 ಕೋಟಿ ರು., ಮಡಿಕೇರಿ-ಕುಟ್ಟ ರಸ್ತೆ (ಎಸ್‌ಎಚ್-89) ಚೈನೇಜ್ 4 ರಿಂದ 8, 10.50 ರಿಂದ 12 ಹಾಗೂ 21 ರಿಂದ 24.43 ರ ವರೆಗಿನ ಭಾಗಗಳಲ್ಲಿ, ಕುಶಾಲನಗರ ಮತ್ತು ಮಡಿಕೇರಿ ತಾಲೂಕುಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 10 ಕೋಟಿ.ರು., ತಲಕಾವೇರಿ ರಸ್ತೆ (ಎಸ್‌ಎಚ್-90) ಕಿ.ಮೀ. 51.00 ರಿಂದ 61 ರವರೆಗಿನ ವಿರಾಜಪೇಟೆ ತಾಲೂಕಿನ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿಗೆ 6 ಕೋಟಿ ರು. ಮಂಜೂರಾಗಿದೆ ಎಂದು ತಿಳಿಸಿದರು.

ಈ ಕುರಿತು ಮಾತನಾಡಿದ ಸಂಸದರಾದ ಯದುವೀರ್ ಒಡೆಯರ್ ಅವರು, ಈ ರಸ್ತೆಗಳು ಕೊಡಗು ಜಿಲ್ಲೆಯ ನಿವಾಸಿಗಳು, ರೈತರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ವ್ಯಾಪಾರ ವಲಯದವರಿಗೆ ಅತ್ಯಂತ ಪ್ರಮುಖ ಸಂಪರ್ಕ ಮಾರ್ಗಗಳಾಗಿವೆ ಎಂದು ತಿಳಿಸಿದರು. ಈ ಕಾಮಗಾರಿಗಳ ಅನುಷ್ಠಾನದಿಂದ ರಸ್ತೆ ಸುರಕ್ಷತೆ, ಪ್ರಯಾಣಿಕರ ಅನುಕೂಲತೆ ಹಾಗೂ ಸಾರಿಗೆ ದಕ್ಷತೆ ಹೆಚ್ಚುವುದರ ಜೊತೆಗೆ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಗು ಜಿಲ್ಲೆಗೆ ಸ್ಥಳೀಯರ ಹಾಗೂ ಪ್ರವಾಸಿಗರ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಉತ್ತಮ ಗುಣಮಟ್ಟದ ರಸ್ತೆ ಮೂಲಸೌಕರ್ಯ ಅತ್ಯಗತ್ಯವಾಗಿದೆ. ಸಿಆರ್‌ಎಫ್ ಅಡಿಯಲ್ಲಿ ದೊರೆತಿರುವ ಈ ಅನುದಾನವು ಬಹುಕಾಲದಿಂದ ಅಭಿವೃದ್ಧಿಗೆ ಕಾಯುತ್ತಿದ್ದ ಪ್ರಮುಖ ರಸ್ತೆ ಭಾಗಗಳ ಉನ್ನತ್ತೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಶಾಲನಗರ: ನದಿಗೆ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲು
ಗೋಣಿಕೊಪ್ಪ: ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿ ಲೋಕಾರ್ಪಣೆ