ಬಸವಕಲ್ಯಾಣದ ವಿವಿಧ ಗ್ರಾ.ಪಂ. ಗಳಿಗೆ ಸಿಇಒ ಗಿಟ್ಟೆ ಭೇಟಿ

KannadaprabhaNewsNetwork |  
Published : Oct 15, 2026, 01:30 AM IST
ಚಿತ್ರ 14ಬಿಡಿಆರ್51ಎ | Kannada Prabha

ಸಾರಾಂಶ

ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬಸವಕಲ್ಯಾಣ

ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು.

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ‘ಬೆಳಗಿನ ನಡೆ ಗ್ರಾಮಗಳ ಕಡೆ’ ಅಂಗವಾಗಿ ಬುಧವಾರ ಅಲಗೂಡ, ಭೋಸ್ಗಾ ಹಾಗೂ ಕೋಹಿನೂರ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿದ ಅವರು, ಗ್ರಾಮಗಳ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಮಳೆ ಇಲ್ಲದೆ ಬೆಳೆ ನಷ್ಟವಾಗಿರಬಹುದು, ಆದರೆ ಧೈರ್ಯ ಕಳೆದುಕೊಳ್ಳಬೇಡಿ. ನಿಮ್ಮೊಂದಿಗೆ ನಾವಿದ್ದೇವೆ. ಗ್ರಾಮಸ್ಥರು ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಅಧಿಕಾರಿಗಳ ಗಮನಕ್ಕೆ ತಂದರು.

ಮಳೆಯ ಅಭಾವದಿಂದ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಒಂದು ವಾರ ದೊಳಗೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ, ವಸತಿ ನಿಲಯ ಕೇಂದ್ರಕ್ಕೆ ಭೇಟಿ: ಅಂಗನವಾಡಿ ಕೇಂದ್ರಕ್ಕೆ ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಪಹಾರದ ಗುಣಮಟ್ಟ ಪರಿಶೀಲನೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಕ್ರಮವಹಿಸಲು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಸಿಇಒ ಅವರು, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೊಂದಿಗೆ ಮಾತನಾಡಿ, “ನಿಮ್ಮ ಕೂಲಿ ಹಣ ಎಲ್ಲಿಯೂ ಹೋಗುವುದಿಲ್ಲ. ನೀವು ಧೈರ್ಯವಾಗಿ ಕೆಲಸ ಮಾಡಿ. ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆಸ್ಪತ್ರೆಯಲ್ಲಿ ಔಷಧಗಳ ಪರಿಶೀಲನೆ: ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಗಳು ಹಾಗೂ ಮಾತ್ರೆಗಳ ದಾಸ್ತಾನು ಪರಿಶೀಲಿಸಿ, ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ. ಅಧಿಕಾರಿ ರಮೇಶ ಸುಲ್ಪಿ, ಸಹಾಯಕ ನಿರ್ದೇಶಕ ಮಹ್ಮದ್ ಸಲೀಂ, ಎಇಇ ಸಂಜುಕುಮಾರ, ಎಇ ಸುನೀಲ ಕುಮಾರ, ಪಿಡಿಒ ಸುಲೋಚನಾ ಬಂಡೆ, ಶಿವಾಜಿ ಚವ್ಹಾಣ ಮೊಹ್ಮದ್ ಪಾಶಾ, ಟಿಸಿ ಶಿವರಾಜ ಪಾಟೀಲ್, ಐಇಸಿ ಸಂಯೋಜಕ ವೀರಾರೆಡ್ಡಿ, ಟಿಎ ಗಳಾದ ಮಲ್ಲಿಕಾರ್ಜುನ ಜಾಧವ್, ರವಿ ಕೊರಾಳೆ, ಜಲೀಲ್‌ ಅಹ್ಮದ್, ಮಾಣಿಕ, ಸುಭಾಷ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರುಳಿಗೆ ಹುಲಿ ಬಲಿ, ದಂತರಹಿತ ಆನೆ ಕಳೇಬರ
ಸಾಗರ ರೈಲ್ವೆ ನಿಲ್ದಾಣಕ್ಕೆ ಲೋಹಿಯಾ ಹೆಸರಿಡಲು ಒತ್ತಾಯ