ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ

KannadaprabhaNewsNetwork |  
Published : Jul 08, 2026, 02:45 AM IST
ವಿಬಿ ಜಿ ರಾಮ್‌ ಜಿ ಯೋಜನೆ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು | Kannada Prabha

ಸಾರಾಂಶ

ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಕರೆ ನೀಡಿದರು.

ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಕರೆ ನೀಡಿದರು.

ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ, ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಬಿ-ಜಿ ರಾಮ್ ಜಿ ಸಿಬ್ಬಂದಿಗಳ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ನಾಲ್ಕು ಅಧಿವೇಶನಗಳಲ್ಲಿ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮಂಗಳೂರು ತಾ.ಪಂ. ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಬಂಟ್ವಾಳ ತಾ.ಪಂ. ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ., ಸುಳ್ಯ ತಾ.ಪಂ. ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಮೂಲ್ಕಿ ತಾ.ಪಂ. ಸಹಾಯಕ ನಿರ್ದೇಶಕ ಅರುಣ್ ಪ್ರದೀಪ್ ಡಿಸೋಜಾ ಅವರು ಯೋಜನೆಯ ಅನುಷ್ಠಾನದ ವಿವಿಧ ವಿಚಾರಗಳ ಕುರಿತು ನಾಲ್ಕು ಅಧಿವೇಶನಗಳಲ್ಲಿ ತರಬೇತಿ ನೀಡಿದರು. ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೊಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲೆಯ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಪಿಎಲ್ ಕಾರ್ಡ್‌ದಾರರಿಗೂ ‘ಆಯುಷ್ಮಾನ್’ ವಿಸ್ತರಣೆ: ಖಾದರ್
ಶಾಲಾ ಮಕ್ಕಳ ಸುರಕ್ಷತೆಗೆ ಆರ್‌ಎಫ್‌ಐಡಿ ಸುರಕ್ಷತಾ ವ್ಯವಸ್ಥೆ!