ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಹಿಪ್ಪರಗಿ ಗ್ರಾಮದ ವಾಲ್ಮೀಕಿ ವಸತಿ ಪ್ರವೇಶದಲ್ಲಿ ಕೈಗೊಂಡ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಾಲ್ಮೀಕಿ ವಸತಿ ಪ್ರದೇಶದ ಜನರಿಗೆ ನಿರಂತರ ಹಾಗೂ ಸುರಕ್ಷಿತ ಕುಡಿಯುವ ನೀರು ಒದಗಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಹಿಪ್ಪರಗಿ ಗ್ರಾಮದ ಜ್ಯಾಕ್ವೆಲ್ ಕಾಮಗಾರಿ ಪರಿಶೀಲಿಸಿದ ಸಿಇಒ ಅವರು ಜ್ಯಾಕ್ ವೆಲ್ ಕಾಮಗಾರಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಪ್ರಮುಖ ಅಂಗವಾಗಿದ್ದು, ದೀರ್ಘಕಾಲಿನ ನೀರು ಲಭ್ಯತೆಗೆ ಸಹಕಾರಿಯಾಗುತ್ತದೆ. ಕಾಮಗಾರಿಯಲ್ಲಿ ಯಾವುದೇ ವಿಳಂಬವಾಗದಂತೆ ಹಾಗೂ ವಿನ್ಯಾಸದ ಪ್ರಕಾರವೇ ಕೆಲಸ ನಡೆಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಶುದ್ಧೀಕರಣ ಘಟಕ ಕಾಮಗಾರಿ ಪರಿಶೀಲಿಸಿದರು. ಘಟಕ ಪೂರ್ಣಗೊಂಡ ನಂತರ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಕಾರ್ಯವಾಗಬೇಕೆಂದು ತಿಳಿಸಿದರು.ಇದೇ ವೇಳೆ ಜಮಖಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿನ ವಿವೇಕ ಕೊಠಡಿ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಾಲಕಿಯರ ಶಿಕ್ಷಣಕ್ಕೆ ಅನುಕೂಲವಾಗುವಂತಹ ಉತ್ತಮ ಮೂಲಸೌಕರ್ಯ ಒದಗಿಸಿ, ಸುಸಜ್ಜಿತ ತರಗತಿ ಕೊಠಡಿಗಳು ನಿರ್ಮಾಣವಾಗಬೇಕು. ಇದರಿಂದ ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ಶೀಘ್ರ ಹಾಗೂ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಭೇಟಿ ಸಮಯದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು & ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಆಕಾಶ ವಂದೆ, ಜಮಖಂಡಿ ತಾಲೂಕಾ ಕಾರ್ಯನಿರ್ವಾಹಣ ಅಧಿಕಾರಿ ಸಚಿನ್. ಎಂ ಸೇರಿದಂತೆ ಇತರರು ಇದ್ದರು.