ಇಲಾಖಾವಾರು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಿಇಓ ಸೂಚನೆ

KannadaprabhaNewsNetwork |  
Published : Nov 19, 2026, 01:15 AM IST
ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಳಾಗಿ ಅಧಿಕಾರ ವಹಿಸಿಕೊಂಡಿರುವ ಜುಬಿನ್ ಮಹಾಪಾತ್ರ ಅವರು ಇಂದು ಜಿಲ್ಲಾ ಪಂಚಾಯತ್ ವೀಡಿಯೋ ಕಾನ್ಫೆರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಕರೆದು, ಇಲಾಖಾ ವ್ಯಾಪ್ತಿಯಲ್ಲಿ ನ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು | Kannada Prabha

ಸಾರಾಂಶ

ಜಿಪಂ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಜುಬಿನ್ ಮಹಾಪಾತ್ರ ಅವರು ಇಂದು ಜಿಪಂ ವೀಡಿಯೋ ಕಾನ್ಫೆರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು, ಇಲಾಖಾ ವ್ಯಾಪ್ತಿಯಲ್ಲಿನ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಪಂ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಜುಬಿನ್ ಮಹಾಪಾತ್ರ ಅವರು ಇಂದು ಜಿಪಂ ವೀಡಿಯೋ ಕಾನ್ಫೆರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು, ಇಲಾಖಾ ವ್ಯಾಪ್ತಿಯಲ್ಲಿನ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಚ ಗ್ಯಾರಂಟಿ ಹಾಗೂ ಆರನೇ ಭೂ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ವಿವಿಧ ಇಲಾಖಾವರು ಜಿ.ಪಂ, ಅನುದಾನ, ಸರ್ಕಾರದ ಇತರೆ ಯೋಜನೆಗಳಡಿಯ ಅನುದಾನ, ಸಕಾಲಕ್ಕೆ ಗುರಿಗೆ ಅನುಗುಣವಾಗಿ ಖರ್ಚು ಮಾಡಿ, ಸೂಕ್ತ ಪ್ರಗತಿ ಸಾಧಿಸಬೇಕು. ಫಲಾನುಭವಿ ಆಧಾರಿತ ಪ್ರತಿಯೊಂದು ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರಕಿಸಬೇಕು. ಅನುದಾನ ಲ್ಯಾಪ್ಸ್‌ ಆಗದಂತೆ ಎಚ್ಚರಿಕೆ ವಹಿಸಬೇಕು. ಅಕ್ರಮಗಳಿಗೆ ಅವಕಾಶ ನೀಡದೆ, ಸರ್ಕಾರದ ನಿರ್ದೇಶನದಂತೆ, ಮಾರ್ಗಸೂಚಿ ಅನ್ವಯ ಎಚ್ಚರಿಕೆ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಯೋಜನೆಗಳ ವರದಿ ಸಿದ್ದವಾಗಿಟ್ಟುಕೊಂಡಿರಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣ ಗಮನಕ್ಕೆ ತರಲು ಸೂಚನೆ ನೀಡಿ, ಶೀಘ್ರದಲ್ಲೇ ಜಿಪಂ ಕಚೇರಿಯಲ್ಲಿ ಕುಂದುಕೊರತೆ ಸ್ವೀಕಾರ ಶಾಖೆ ತೆರೆದು, ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಗಮನ ನೀಡಲಾಗುವುದು. ಅಧಿಕಾರಿಗಳು ಕೂಡ ನ್ಯಾಯಬದ್ಧವಾಗಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲು ನಿರ್ದೇಶಿಸಿದರು.

ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯಿಂದ ಹೊರಬರಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಪ್ರಭಾರಿ ಉಪಕಾರ್ಯದರ್ಶಿ ಶರಣಬಸವ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ