ಸಾವಯವ, ಸಿರಿಧಾನ್ಯಗಳ ನಡಿಗೆ-2026 ಜಾಗೃತಿ ಜಾಥಾಕ್ಕೆ ಶಾಸಕ ಚಾಲನೆಕನ್ನಡಪ್ರಭ ವಾರ್ತೆ ಶಿರಸಿ
ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಬದಲಾಗುತ್ತಿರುವ ಇಂದಿನ ಜೀವನಶೈಲಿಯಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾವಯವ ಕೃಷಿ ಪದ್ಧತಿ ಹಾಗೂ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ಬಳಕೆ ಇಂದಿನ ಅಗತ್ಯವಾಗಿದೆ. ನಮ್ಮ ಹಿರಿಯರು ಸಿರಿಧಾನ್ಯಗಳನ್ನು ಬಳಸುತ್ತಿದ್ದರಿಂದಲೇ ದೀರ್ಘಕಾಲ ಆರೋಗ್ಯವಾಗಿದ್ದರು. ಇಂದಿನ ಪೀಳಿಗೆ ಕೂಡ ಜಂಕ್ ಫುಡ್‌ಗಳ ಬದಲಾಗಿ ಸಿರಿಧಾನ್ಯಗಳನ್ನು ತಮ್ಮ ಆಹಾರದಲ್ಲಿ ಅಳವಡಿಸಿಕೊಳ್ಳಬೇಕು. ರೈತರು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ವಿಷಮುಕ್ತ ಆಹಾರ ಉತ್ಪಾದನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ನಮ್ಮ ನಡಿಗೆ ಸಾವಯವ ಮತ್ತು ಸಿರಿಧಾನ್ಯಗಳ ಕಡೆಗೆ ಎಂಬ ಘೋಷವಾಕ್ಯದೊಂದಿಗೆ ಉತ್ಸಾಹದಿಂದ ಜನರು ಪಾಲ್ಗೊಂಡಿದ್ದರು. ಬೆಳಗ್ಗೆ 6:30 ರಿಂದ 8:30 ರವರೆಗೆ ನಡೆದ ಈ ನಡಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿತು.ಸ್ಕೊಡ್‌ವೆಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ವಾಸುದೇವ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಡಾ. ಬಿ.ಪಿ. ಸತೀಶ, ಸಹಾಯಕ ನಿರ್ದೇಶಕ ಸತೀಶ ಹೆಗಡೆ, ತಾಪಂ ಇಒ ಚನ್ನಬಸಪ್ಪ ಹಾವಣಗಿ, ನಗರಸಭೆ ಪೌರಾಯುಕ್ತ ಪ್ರಕಾಶ ಚನ್ನಪ್ಪನವರ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸದಸ್ಯ ಜಾಫಿ ಪೀಟರ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನೂರಾರು ಸಾರ್ವಜನಿಕರು ಪಾಲ್ಗೊಂಡಿದ್ದರು.