ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾಪಂಚಾಯತ್,ಕೃಷಿ ಇಲಾಖೆ ಮಂಗಳವಾರ ಆಯೋಜಿಸಿದ್ದ ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ ಕಾರ್ಯಕ್ರಮದ ಪ್ರಯುಕ್ತ ಸಿರಿಧಾನ್ಯಗಳ ಮಹತ್ವ ಸಾರುವ ಜಾಗೃತಿ ಕರಪತ್ರಗಳು ಮತ್ತು ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸಿಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಪೂರ್ವಭಾವಿಯಾಗಿ ನಮ್ಮ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯಲು ಹೆಚ್ಚು ಒಲವು ನೀಡಿ ಪ್ರೋತ್ಸಾಹಿಸಬೇಕು. ಸಿರಿಧಾನ್ಯಗಳು ನಮ್ಮ ಪರಿಸರ ಸ್ನೇಹಿಯಾಗಿದ್ದು ಮಳೆ ಆಶ್ರಿತ ಪ್ರದೇಶಗಳಲ್ಲಿ ಕಡಿಮೆ ನೀರಿನ ಉಪಯೋಗದಲ್ಲಿ ಬೆಳೆಯಬಹುದು ಎಂದರು.
ಸಿರಿಧಾನ್ಯಗಳಿಗೆ ಹಿಂದಿನಿಂದ ನಮ್ಮ ಪೂರ್ವಿಕರು ಹೆಚ್ಚು ಒತ್ತು ನೀಡುತ್ತಿದ್ದರು.. ಈ ಧಾನ್ಯಗಳ ಬಳಕೆಯಿಂದ ಮಧುಮೇಹ, ಹೃದಯರೋಗ, ಕರುಳುಬೇನೆ ಹಾಗೂ ಕ್ಯಾನ್ಸರ್ ನಂತಹ ಇತ್ಯಾದಿ ಕಾಯಿಲೆಗಳನ್ನು ತಡೆಯಬಹುದಾಗಿದೆ ಸಿರಿಧಾನ್ಯಗಳಿಂದ ರೋಗನಿರೋಧಕ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಮತ್ತು ಜಾಗೃತಿ ಕಾರ್ಯಕ್ರಮವನ್ನು ಜನವರಿ 23 ರಿಂದ 25 ರ ವರಗೆ ಬೆಂಗಳೂರಲ್ಲಿ ಆಯೋಜಿಸಲಾಗುತ್ತದೆ. ಈ ಮೇಳಕ್ಕೆ ಜಿಲ್ಲೆಯ ಸಮಸ್ತ ಜನರು ಆಗಮಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಜಿಲ್ಲಾಆರೋಗ್ಯ ಮತ್ತು ಕುಟುಂಭ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ತಹಸೀಲ್ದಾರ್ ಅನಿಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ಧೇಶಕ ಜುಂಜಣ್ಣ, ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್, ಮುದ್ದೇನಹಳ್ಳಿ ಗೋವಿಂದರೆಡ್ಡಿ, ಪ್ರಗತಿ ಪರ ಸಿರಿಧಾನ್ಯ ಬೆಳೆಗಾರರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಾಕಥಾನ್ ನಲ್ಲಿ ಭಾಗವಹಿಸಿದ್ದರು.