ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆಗಾರರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಈ ಮೇಳದಲ್ಲಿ ವಿವಿಧ ರೀತಿಯ ಸಿರಿಧಾನ್ಯಗಳ ಪದಾರ್ಥಗಳು ಮತ್ತು ಉತ್ಪನ್ನಗಳಿಗೆ ಸಂಬಂಧಪಟ್ಟಂತೆ ಸುಮಾರು 50 ಮಳಿಗೆಗಳಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.1980ರಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಹೊಸ ಕೃಷಿ ನೀತಿಯಿಂದಾಗಿ ನಮ್ಮ ದೇಶದಲ್ಲಿ ಹಲವಾರು ಬೆಳೆಗಳನ್ನು ಬೆಳೆಯುವುದರ ಮೂಲಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಯಿತು ಎಂದು ಹೇಳಿದರು.
ರಾಗಿ ಬೆಳೆಯನ್ನು ಆಫ್ರಿಕಾ ದೇಶದಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದರು. ಆ ಬೆಳೆಯನ್ನು ನಮ್ಮ ದೇಶದಲ್ಲಿ ಬೆಳೆಯಲು ಆರಂಭಿಸಲಾಯಿತು. ನಮ್ಮ ರಾಜ್ಯದ ಹಳೇ ಮೈಸೂರು ಭಾಗದಲ್ಲಿ ಹೆಚ್ಚಾಗಿ ರಾಗಿ ಬೆಳೆಯನ್ನು ಇಂದಿಗೂ ಬೆಳೆಯುತ್ತಿದ್ದಾರೆ ಎಂದು ತಿಳಿಸಿದರು.
ರೈತರ ಪರವಾದ ಸರ್ಕಾರ ನಮ್ಮದಾಗಿದೆ. ರೈತರು ಆಂತಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಆಫ್ರಿಕಾ ಖಂಡದಲ್ಲಿರುವ ಅನೇಕ ದೇಶಗಳಲ್ಲಿ ಇಂದಿಗೂ ಆಹಾರ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಆದರೆ ಇಂದು ನಮ್ಮ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಪಡೆದಿದೆ ಹಾಗೂ ಇಂದು ಅನೇಕ ಆಹಾರ ಪದಾರ್ಥಗಳನ್ನು ಹೊರ ದೇಶಗಳಿಗೆ ರಪ್ತು ಮಾಡಲಾಗುತ್ತಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸಿರಿಧಾನ್ಯ ಉತ್ಪನ್ನಗಳನ್ನು ನೀಡಲಾಗುವುದು. ಇದರಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಿದಂತೆ ಆಗುತ್ತದೆ ಎಂದು ಹೇಳಿದರು.
ಕೋಟ್
ಸಿರಿ ಧಾನ್ಯಗಳು ಒಣಭೂಮಿಯ ಬೆಳೆಯಾಗಿದ್ದು, ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಬರಗಾಲದ ಬೆಳೆಗಳಾಗಿವೆ. ರಾಗಿ, ಸಾಮೆ, ಬರಗೂ, ನವಣೆ, ಹಾರಕ, ಕೊರಳೆ ಸಿರಿಧಾನ್ಯಗಳು ಗಾತ್ರದಲ್ಲಿ ಕಿರಿದಾದರೂ ಅಧಿಕ ಪೌಷ್ಟಿಕಾಂಶವುಳ್ಳ ಧಾನ್ಯಗಳಾಗಿವೆ.ಡಾ.ಜಿ. ಪರಮೇಶ್ವರ್ ಗೃಹಸಚಿವರು